ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್‌ ಉಡುಗೊರೆ – ರಾಜ್ಯಕ್ಕೆ 3705 ಕೋಟಿ ರೂ. ಕೊಡುಗೆ: ಪ್ರಹ್ಲಾದ್ ಜೋಶಿ‌

Picture of Savistara

Savistara

Bureau Report

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!