ಉಡುಪಿ ನಗರಸಭೆಯ ಕರ್ವಾಲಿನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ: ಕೋಟ್ಯಂತರ ರೂ. ನಷ್ಟ

Picture of Savistara

Savistara

Bureau Report

ಉಡುಪಿ : ಉಡುಪಿ ನಗರಸಭೆಗೆ ಸಂಬಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಇದರಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ.ಇಂದು ಬೆಳಗಿನ ಜಾವ ೩ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಮ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ.ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ. ಇದರಿಂದ ಸುಮಾರು ೬-೭ಕೋಟಿ ರೂ. ನಷ್ಟ ಉಂಟಾಗಿರಬಹುದೆಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!