ಮುಂದಿನ ವಾರ ಭಾರತಕ್ಕೆ ಇಂಗ್ಲೆಂಡ್ ಪ್ರಧಾನಿ ಭೇಟಿ; ವ್ಯಾಪಾರ, ಭದ್ರತೆ ಕುರಿತು ಮೋದಿ ಜೊತೆ ಚರ್ಚೆ

Picture of Savistara

Savistara

Bureau Report

ನವದೆಹಲಿ : ಕಳೆದ ವರ್ಷ ಜುಲೈನಲ್ಲಿ ಇಂಗ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರು ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಅಕ್ಟೋಬರ್ 8 ಮತ್ತು 9ರಂದು ಸ್ಟಾರ್ಮರ್ ಭಾರತಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಮೋದಿ ಜೊತೆ ಭಾರತ ಮತ್ತು ಯುಕೆಯ ನಡುವಿನ ವ್ಯಾಪಾರ ಒಪ್ಪಂದ ಮತ್ತು ಭದ್ರತೆಯ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಸ್ಟಾರ್ಮರ್ ಅಕ್ಟೋಬರ್ 9ರಂದು ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮುಂದಿನ 10 ವರ್ಷಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ಮಾರ್ಗಸೂಚಿಯಾದ ‘ವಿಷನ್ 2035’ಗೆ ಅನುಗುಣವಾಗಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ಮೋದಿ ಮತ್ತು ಸ್ಟಾರ್ಮರ್ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಭವಿಷ್ಯದ ಭಾರತ-ಯುಕೆ ಆರ್ಥಿಕ ಪಾಲುದಾರಿಕೆಯ ಕೇಂದ್ರ ಆಧಾರಸ್ತಂಭವಾಗಿ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿಇಟಿಎ) ಪ್ರಸ್ತುತಪಡಿಸಿದ ಅವಕಾಶಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!