ಪಾಕ್ ತಂಟೆಗೆ ಬಂದರೆ ಹುಷಾರ್ !: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ರಕ್ಷಣಾ ಸಚಿವ

Picture of Savistara

Savistara

Bureau Report

ಇಸ್ಲಾಮಾಬಾದ್: ‘ನಮ್ಮ ವಿರುದ್ಧ ಯಾವುದೇ ರೀತಿಯ ಸೈನಿಕ ದಾಳಿಗೆ ಭಾರತವು ಪ್ರಯತ್ನಿಸಿದರೆ, ನಾವು ತಕ್ಕ ಉತ್ತರ ನೀಡುತ್ತೇವೆ’ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಹೇಳಿದ್ದಾರೆ.

ಇತ್ತೀಚೆಗೆ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಸೇನಾ ಮುಖ್ಯಸ್ಥ ಉಪೇಂದ್ರ ದಿವೇದಿ ಅವರು, ಭಾರತದ ವಿರುದ್ಧ ಯಾವುದೇ ದುಸ್ಸಾಹಸಕ್ಕೆ ಮುಂದಾಗದಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು. ಅದಕ್ಕೆ ಖವಾಜಾ ಆಸಿಫ್ ತಿರುಗೇಟು ನೀಡಿದ್ದಾರೆ.’ಭಾರತೀಯ ಸೇನೆ ಮತ್ತು ಅಲ್ಲಿನ ರಾಜಕೀಯ ನಾಯಕರ ಹೇಳಿಕೆಗಳು ಕಳೆದು ಹೋಗಿರುವ ವಿಶ್ವಾಸರ್ಹತೆ, ಘನತೆಯನ್ನು ಮರಳಿ ಪಡೆಯುವ ವಿಫಲ ಪ್ರಯತ್ನವಾಗಿದೆ’ ಎಂದು ಹೇಳಿದ್ದಾರೆ.ಆಪರೇಷನ್‌ ಸಿಂಧೂರ ವೇಳೆ ಪಾಕಿಸ್ತಾನದ ಸೇನಾ ನೆಲೆಗಳು ಹಾಗೂ ಮಿಲಿಟರಿ ವಿಮಾನಗಳನ್ನು ನಾಶ ಮಾಡಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಎ.ಪಿ. ಸಿಂಗ್ ಅವರು ಶುಕ್ರವಾರ ಹೇಳಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!