ಬೆಂಗಳೂರು: ದ.ಕ ಜಿಲ್ಲೆಯಲ್ಲಿ ಕಾಡಾನೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆಯವರಿಂದ ಅನುಮೋದನೆ

Picture of Savistara

Savistara

Bureau Report

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ಹಾವಳಿತಡೆಗಟ್ಟಿ, ಅವುಗಳನ್ನು ಕಾಡಿಗೆ ಅಟ್ಟಲು ವಿಶೇಷ ಆನೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯಲ್ಲಿ 48 ಸಿಬ್ಬಂದಿ ಇರಲಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಮಂಗಳೂರು ವಿಭಾಗದ

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪಡೆಯ ಮುಖ್ಯಸ್ಥರಾಗಲಿದ್ದಾರೆ. ತಲಾ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ ಇರಲಿದ್ದಾರೆ. ಜತೆಗೆ ನಾಲ್ವರು ಉಪ ವಲಯ ಅರಣ್ಯಾಧಿಕಾರಿ, ಎಂಟು ಅರಣ್ಯ ರಕ್ಷಕರು ಮತ್ತು 32 ಹೊರಗುತ್ತಿಗೆ ಸಿಬ್ಬಂದಿ ಕಾರ್ಯಪಡೆಯಲ್ಲಿ ಇರಲಿದ್ದಾರೆ. ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಕಾರ್ಯಪಡೆ ಸಿಬ್ಬಂದಿ ಗಸ್ತು ನಡೆಸಲಿದ್ದಾರೆ. ಆನೆಗಳು ಕಂಡುಬಂದಲ್ಲಿ ಅವುಗಳನ್ನು ಕಾಡಿಗೆ ಅಟ್ಟಲು ಕ್ರಮ ತೆಗೆದುಕೊಳ್ಳಲಿದೆ. ಜತೆಗೆ ಕಾಡಾನೆಗಳ ಚಲನವಲನದ ಬಗ್ಗೆ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಲಿದೆ ಎಂದು ಇಲಾಖೆ ತಿಳಿಸಿದೆ. ಆನೆ ಹಾವಳಿ ಅಧಿಕವಾಗಿರುವ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಆನೆ ಹಾವಳಿ ಅಧಿಕವಾಗಿದ್ದು ನಾಡಿಗೆ ಇಳಿಯುವ ಕಾಡಾನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!