ಇಂದು ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಆಯೋಗ

Picture of Savistara

Savistara

Bureau Report

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಘೋಷಿಸುವುದಾಗಿ ಭಾರತೀಯ ಚುನಾವಣಾ ಆಯೋಗ ಹೇಳಿದೆ.

ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಇತರ ಮಾಹಿತಿಗಳನ್ನು ಬಹಿರಂಗಗೊಳಿಸುವುದಾಗಿ ಆಯೋಗದ ಪ್ರಕಟಣೆ ತಿಳಿಸಿದೆ.ಬಿಹಾರದಲ್ಲಿ ಸೆ.30ರಂದು ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪೂರ್ಣಗೊಳಿಸಿದೆ.ಎಸ್‌ಐಆರ್‌ನ ಕೊನೆಯ ಪಟ್ಟಿಯ ಪ್ರಕಾರ, 47 ಲಕ್ಷ ಮತದಾರರು ಕಡಿಮೆಯಾಗಿ ಒಟ್ಟು 7.42 ಕೋಟಿ ಮತದಾರರು ಇದ್ದಾರೆ.

ಆಗಸ್ಟ್‌ನಲ್ಲಿ ಪ್ರಕಟಿಸಿದ್ದ ಕರಡುಪಟ್ಟಿಯಲ್ಲಿ ಗೈರು ಹಾಜರಿ, ಸ್ಥಳಾಂತರ ಅಥವಾ ಮೃತಪಟ್ಟಿದ್ದಾರೆ ಎಂಬ ಕಾರಣಗಳನ್ನು ನೀಡಿ 65 ಲಕ್ಷ ಮತದಾರರ ಹೆಸರುಗಳನ್ನು ಹೊರಗಿಡಲಾಗಿತ್ತು. ಕರಡು ಪಟ್ಟಿಯಲ್ಲಿ ಬಿಟ್ಟುಹೋಗಿದ್ದ 21.53 ಲಕ್ಷ ಅರ್ಹ ಮತದಾರರ ಹೆಸರುಗಳನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.243 ಸದಸ್ಯ ಬಲದ ಬಿಹಾರ ರಾಜ್ಯ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!