ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ; ನಾಳೆ ನಿರ್ಧಾರ: ತಂಗಡಗಿ

Picture of Savistara

Savistara

Bureau Report

ಕೊಪ್ಪಳ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೊನೆಯ ದಿನಾಂಕ ಅ. 7ರಂದು (ನಾಳೆ) ಮುಕ್ತಾಯವಾಗಲಿದ್ದು, ದಿನಾಂಕ ವಿಸ್ತರಣೆ ಬಗ್ಗೆ ಮಂಗಳವಾರ ನಿರ್ಧಾರ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿಗಿಂತಲೂ ಈಗ ವೇಗವಾಗಿ ಸಮೀಕ್ಷೆ ನಡೆಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇದೆಲ್ಲವನ್ನೂ ಅವಲೋಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಮಂಗಳವಾರ ಮಧ್ಯಾಹ್ನ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು.ಸಚಿವ ವಿ. ಸೋಮಣ್ಣ ಹಾಗೂ ಬಿಜೆಪಿ ನಾಯಕರು ಮಾನಸಿಕವಾಗಿ ಕುಗ್ಗಿದ್ದಾರೆ. ಜಾತಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಮಾತ್ರ ಜಾತಿಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!