ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ

Picture of Savistara

Savistara

Bureau Report

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಆಯುಷ್ಮಾನ್‌ ಭಾರತ್‌ ಹೆಲ್ತ್‌ ಸೆಂಟರ್‌ ಸ್ಥಾಪನೆಗೂ ತಲಾ 65 ಲಕ್ಷ ರೂ. ಮಂಜೂರಾಗಿದ್ದು, ಅದರಡಿ ಸೂಕ್ತ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಒಟ್ಟು 38 ಊರುಗಳಲ್ಲಿ ನೂತನ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪಿಸಲು ಟೆಂಡರ್‌ ಪ್ರಕ್ರಿಯೆ ಕೂಡ ಪೂರ್ಣಗೊಳ್ಳಲಿದೆ ಎಂದು ಸಂಸದ ಕ್ಯಾ.ಚೌಟ ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಯಿಂದ ಗ್ರಾಮೀಣ ಭಾಗದ ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ. ಜತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳೇ ಇಲ್ಲದ ಊರುಗಳಿಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಧಾನಮಂತ್ರಿಗಳ ಈ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ನೆರವಾಗಲಿವೆ. ಹೀಗಾಗಿ, ಈ ಎಚ್‌ಡಬ್ಲ್ಯುಸಿ ಕೇಂದ್ರಗಳ ಸ್ಥಾಪನೆಗೆ ಅನುದಾನ ಮಂಜೂರು ಮಾಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹಾಗೂ ಆರೋಗ್ಯ ಸಚಿವಾಲಯಕ್ಕೆ ಧನ್ಯವಾದ ಸಲ್ಲಿಸುವುದಾಗಿ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

38 HWC ಕೇಂದ್ರಗಳು ಹೀಗಿವೆ-

ಪುತ್ತೂರು ತಾಲೂಕಿನ ಕೈಕಂಬ, ಪಡ್ನೂರು, ನೆಟ್ಟಾರು, ಕುರಿಯ, ಕುಟ್ರುಪಾಡಿ ಮತ್ತು ನೆಕ್ಕಿಲಾಡಿ. ಸುಳ್ಯದ ಐನಕಿದು, ನೆಲ್ಲುರು ಕೆಮ್ರಾಜೆ, ಸುಳ್ಯ-ಡಿ, ತೋಡಿಕಾನ, ಸುಳ್ಯ-ಎ, ಸುಳ್ಯ-ಬಿ ಮತ್ತು ಸುಳ್ಯ-ಸಿ. ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಮಂಗಿಲಪದವು, ಮೂಡುಪಡುಕೋಡಿ, ಸರಪಾಡಿ, ವೀರಕಂಬ, ಸಜಿಪಪಡು, ವಿಟ್ಲ ಮುನ್ನೂರು (ಶಂಭೂರು), ಕುರಿಯಾಳ ಮತ್ತು ಪೊಳಲಿ.ಬೆಳ್ತಂಗಡಿ ತಾಲೂಕಿನ ಕುತ್ಲೂರು, ನಾಲ್ಕೂರು, ತೆಂಕ ಕರಂದೂರು, ಲಾಯಿಲಾ- ಎ, ನ್ಯಾಯತರ್ಪು ಮತ್ತು ಪುದುವೆಟ್ಟು. ಮಂಗಳೂರು ತಾಲೂಕಿನ ಕೆಂಜಾರು, ಮನ್ನಬೆಟ್ಟು, ಮೂಡುಶೆಡ್ಡೆ ಮತ್ತು ಕೊಲ್ಲೂರು. ಮೂಡುಬಿದಿರೆಯ ವಾಲ್ಪಡಿ, ಮಾರ್ಪಡಿ-ಎ, ಮಾರ್ಪಡಿ-ಬಿ, ತೋಕೂರು ಪ್ರಾಂತ್ಯ-ಬಿ ಮತ್ತು ಪ್ರಾಂತ್ಯ-ಸಿ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!