ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರೀಕ್ಷೆಯಂತೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ

ಗಣತಿ ಅವಧಿಯನ್ನು ವಿಸ್ತರಿಸಲಾಗಿದ್ದು ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.ಇದರಿಂದ ಅಕ್ಟೋಬರ್ 18ರವರೆಗೆ ಶಾಲೆಗಳಿಗೆ ರಜೆ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ರಜೆ ಸರ್ಕಾರಿ ಮತ್ತು ಅನಿಧಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದರು.ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ.97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ, ಇತಿ ನೀಡಲಾಗಿದೆ ಎಂದರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!