ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ; ದಿನಾಂಕ ಬದಲಿಸಲು ಅವಕಾಶ

Picture of Savistara

Savistara

Bureau Report

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ.ಮೊದಲೆಲ್ಲ ಟಿಕೆಟ್ ಬುಕಿಂಗ್ ಆದ್ರೆ, ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, ನಂತರ ಹೊಸ ಟಿಕೆಟ್ ಬುಕಿಂಗ್ ಮಾಡಬೇಕಿತ್ತು. ಆದರೆ ರೈಲ್ವೆ ಇಲಾಖೆ ಈ ನಿಯಮ ಬದಲಾವಣೆಗೆ ಮುಂದಾಗಿದೆ. ದಿನಾಂಕ ಬದಲಾವಣೆಗೆ ಯಾವುದೇ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ.ಅಲ್ಲದೇ ರದ್ದತಿ ವೇಳೆ ಆಗುವ ಹಣ ಕಡಿತದಂತೆ ಇಲ್ಲಿ ಆಗುವುದಿಲ್ಲ ಎನ್ನುವ ಮೂಲಕ ರೈಲ್ವೆ ಟಿಕೆಟ್ ಬುಕಿಂಗ್ ವೇಳೆ ಇದ್ದ ನಿಯಮ ಸಡಿಲಿಕೆಗೆ ಇಲಾಖೆ ಮುಂದಾಗಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!