ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಕುರಿತು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಸಚಿವರ ಭೇಟಿ

Picture of Savistara

Savistara

Bureau Report

ಇಂದು ಬೆಂಗಳೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಶ್ರೀ ಎನ್.ಎಸ್. ಬೋಸು ರಾಜು ಅವರನ್ನು ಭೇಟಿಯಾಗಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯಬೇಕಿರುವ ತಡೆಗೋಡೆ ನಿರ್ಮಾಣ, ಕೆರೆ ಅಭಿವೃದ್ಧಿ, ಸೇತುವೆ ಅಭಿವೃದ್ಧಿ ಮತ್ತು ಇತರ ಸಾರ್ವಜನಿಕ ಬೇಡಿಕೆಗಳ ಕಾಮಗಾರಿಗಳಿಗೆ ಅಗತ್ಯವಾದ ಅನುದಾನವನ್ನು ಒದಗಿಸಲು ಮನವಿ ಸಲ್ಲಿಸಿದರು.ಈ ಮನವಿಗೆ ಸ್ಪಂದಿಸಿದ ಸಚಿವ ಬೋಸು ರಾಜು ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಾದ ಕಾಮಗಾರಿಗಳಿಗೆ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವ ಕುರಿತು ಭರವಸೆ ನೀಡಿದರು.ಇದಕ್ಕೆ ಪೂರಕವಾಗಿ, ಶಾಸಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತ್ ರಾಜ್ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ (IAS) ಅವರನ್ನು ಕೂಡ ಬೆಂಗಳೂರಿನಲ್ಲಿ ಭೇಟಿಯಾಗಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗ್ರಾಮ ಪಂಚಾಯತಿಗಳು ಪ್ರಸ್ತುತ ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಿದರು.ಈ ವೇಳೆ ಶಾಸಕರು ಪ್ರಸ್ತಾಪಿಸಿದ ಪ್ರಮುಖ ವಿಷಯಗಳು:ನಮೂನೆ 9, 11A ಮತ್ತು 11B ಪ್ರಮಾಣಪತ್ರಗಳ ವಿತರಣೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳು.ಇ-ಸ್ವತ್ತು ತಂತ್ರಾಂಶದಲ್ಲಿನ ಅಡಚಣೆಗಳು, ಉದಾಹರಣೆಗೆ 9 ಮತ್ತು 11A ರಿಂದ 11B ಗೆ ಬದಲಾವಣೆ ಸಾಧ್ಯವಾಗದಿರುವುದು, ನಮೂನೆ 11B ವಿತರಣೆಗೆ ತೊಂದರೆ, ಹಾಗೂ ವಸತಿ ಯೋಜನೆಯಡಿ ನೀಡಲಾದ ಮನೆಗಳಿಗೆ ಕದನಂಬರ (door number) ನೀಡುವಲ್ಲಿ ಸಾಫ್ಟ್‌ವೇರ್ ಅಡ್ಡಿಗಳು.ಗ್ರಾಮ ಪಂಚಾಯತ್ ರಸ್ತೆ ಸ್ವಾಧೀನಕ್ಕೆ ಸಂಬಂಧಿಸಿದ ಕಾನೂನು ಮತ್ತು ತಾಂತ್ರಿಕ ಅಡಚಣೆಗಳು.ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ವೇಗಗೊಳಿಸುವ ಅಗತ್ಯ.ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಮುಂಬಡ್ತಿ ನೀಡುವ ಕುರಿತು ಕ್ರಮ ಕೈಗೊಳ್ಳುವ ಅಗತ್ಯ.ಈ ಕುರಿತು ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ IAS ಅವರು ಕೆಲವು ವಿಷಯಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ, ಹಾಗೂ ಉಳಿದ ವಿಷಯಗಳನ್ನು ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಭೇಟಿಯು ಉಭಯ ಜಿಲ್ಲೆಗಳ ಗ್ರಾಮೀಣ ಆಡಳಿತ ಮತ್ತು ಮೂಲಸೌಕರ್ಯಾಭಿವೃದ್ಧಿ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಅನೇಕ ಸಮಸ್ಯೆಗಳ ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!