ಯಶಸ್ವಿನಿ ಯೋಜನೆ ಫಲಾನುಭವಿಗಳಿಗಿಲ್ಲ ಆಯುಷ್ಮಾನ್ ಭಾರತ್

Picture of Savistara

Savistara

Bureau Report

ಬೆಂಗಳೂರು: ಯಶಸ್ವಿನಿ ಯೋಜನೆಯ ಫಲಾನುಭವಿಗಳನ್ನು ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಹಕಾರ ಇಲಾಖೆಯಿಂದ ಯಶಸ್ವಿನಿ ಹಾಗೂ ಆರೋಗ್ಯ ಇಲಾಖೆಯಿಂದ ಎಬಿಎಆರ್ ಕೆ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ಪೈಕಿ ಹೆಚ್ಚಿನ ಕುಟುಂಬಗಳು ಎರಡೂ ಯೋಜನೆಯ ಫಲಾನುಭವಿಗಳಾಗಿದ್ದಾರೆ.ಎರಡೂ ಯೋಜನೆಗಳು ಪ್ರತಿ ಕುಟುಂಬಕ್ಕೆವಾರ್ಷಿಕ ತಲಾ 5 ಲಕ್ಷದವರೆಗೆ ಆರೋಗ್ಯಸೇವಾ ಸೌಲಭ್ಯ ಒದಗಿಸುತ್ತದೆ. ಆದ್ದರಿಂದಫಲಾನುಭವಿಗಳು ಯಾವುದಾದರೂಒಂದು ಯೋಜನೆಯಡಿ ಪ್ರಯೋಜನಪಡೆಯಬೇಕು ಎಂದು ತಿಳಿಸಲಾಗಿದೆ.ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(ಸಾಸ್ಟ್) ಎರಡೂ ಯೋಜನೆಗಳನ್ನು

ನಿರ್ವಹಣೆ ಮಾಡುತ್ತಿದೆ. ರಾಜ್ಯದಲ್ಲಿ41.51ಲಕ್ಷ ಮಂದಿ ಯಶಸ್ವಿನಿಫಲಾನುಭವಿಗಳಾಗಿದ್ದು, 41.09 ಲಕ್ಷಮಂದಿ ಆಧಾ‌ರ್ ಹೊಂದಿದ್ದಾರೆ. ಇವರಲ್ಲಿ35.71 ಲಕ್ಷ ಮಂದಿ ಎರಡೂ ಯೋಜನೆಗಳಫಲಾನುಭವಿಗಳಾಗಿದ್ದಾರೆ. ಕಳೆದ ವರ್ಷದಲ್ಲಿ3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆಎಬಿಎಆರ್‌ಕೆ ಅಡಿಯಲ್ಲಿ 13.22ಕೋಟಿ ಮೊತ್ತದ ಚಿಕಿತ್ಸೆ ಪಡೆದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!