ಜಾಮೀನು ಷರತ್ತು ಉಲ್ಲಂಘನೆ ಆರೋಪ : SDPI ಮುಖಂಡ ರಿಯಾಜ್ ಕಡಂಬು ಬಂಧನ!

Picture of Savistara

Savistara

Bureau Report

ಉಡುಪಿ : ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು, ಜಾಮೀನು ಷರತ್ತನ್ನು ಉಲ್ಲಂಘಿಸಿದ್ದರು.ಆ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾದ ರಿಯಾಜ್ ಅವರನ್ನು ಉಡುಪಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!