ಮಹದೇವಪುರ ವಿಧಾನಸಭಾ ಕ್ಷೇತ್ರ | ವಿಭಜನೆ ಏಕಪಕ್ಷೀಯ, ಆಕ್ಷೇಪ: ಹೈಕೋರ್ಟ್‌ ನೋಟಿಸ್‌

Picture of Savistara

Savistara

Bureau Report

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಪೂರ್ವನಗರ ಪಾಲಿಕೆ ಮತ್ತು ದಕ್ಷಿಣ ನಗರ ಪಾಲಿಕೆ ನಡುವಿನ ವಿಭಜನೆ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಪಿ.ಎಸ್.ಹರೀಶ್ ಮತ್ತು ಆರ್.ದಿಲೀಪ್ ಕುಮಾ‌ರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆ‌ರ್.ರವಿಶಂಕರ್ ಮತ್ತು ಎ.ಪಿ.ರಂಗನಾಥ್ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ಮುಂದೂಡಿತು.’ಮಹದೇವಪುರ ವಿಧಾನಸಭಾ ಕ್ಷೇತ್ರದ ಗಣನೀಯ ಭಾಗವನ್ನು 2025ರ ಸೆಪ್ಟೆಂಬರ್ 2 ರಂದು ಹೊರಡಿಸಲಾಗಿರುವ ಅಧಿಸೂಚನೆಯ ಪ್ರಕಾರ ಪೂರ್ವ ನಗರ ನಿಗಮದೊಳಗೆ ಸೇರ್ಪಡೆ ಮಾಡಲಾಗಿದೆ ಮತ್ತು ಒಂದು ಪುಟ್ಟ ಭಾಗವನ್ನು ದಕ್ಷಿಣ ನಗರ ನಿಗಮಕ್ಕೆ ವರ್ಗಾಯಿಸಲಾಗಿದೆ. ಇದು ಅನಿಯಂತ್ರಿತ ಮತ್ತು ಗ್ರೇಟ‌ರ್ ಬೆಂಗಳೂರು ಆಡಳಿತ ಕಾಯ್ದೆ-2024ರ ಕಲಂ 26(3) ರ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಅಂಬಲಿಪುರ, ಹರಳೂರು, ಕೈಕೊಂಡನಹಳ್ಳಿ, ಕಸವನಹಳ್ಳಿ, ಕೆಪಿಸಿಎಲ್ ಲೇ-ಔಟ್, ಜುನ್ನಸಂದ್ರ, ದೊಡ್ಡಕನ್ನಳ್ಳಿ ಸೇರಿದಂತೆ ಹಲವಾರು ಗ್ರಾಮಗಳನ್ನು ಮತದಾರರು, ವಸತಿ ಕಲ್ಯಾಣ ಸಂಘಗಳು ಮತ್ತು ಇತರ ಕಾರ್ಯಕರ್ತರ ಪರವಾಗಿ ಸಲ್ಲಿಸಲಾದ ಆಕ್ಷೇಪಣೆಗಳ ಹೊರತಾಗಿಯೂ ದಕ್ಷಿಣ ಮತ್ತು ಪೂರ್ವ ನಗರ ಪಾಲಿಕೆಗಳ ನಡುವೆ ಏಕಪಕ್ಷೀಯವಾಗಿ ವಿಂಗಡಿಸಲಾಗಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!