JDU ಸೀಟು ಹಂಚಿಕೆ ಅಂತಿಮ; ನಾಲ್ವರು ಹಾಲಿ ಶಾಸಕರಿಗೆ ಕೊಕ್?

Picture of Savistara

Savistara

Bureau Report

ಪಟ್ನಾ: ಬಿಹಾರದ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಜನತಾದಳ (ಯುನೈಟೆಡ್) ಪಕ್ಷ ಅಂತಿಮಗೊಳಿಸಿದ್ದು, ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಜೆಡಿ (ಯು) ಪಕ್ಷದ ಹಿರಿಯ ನಾಯಕರೊಬ್ಬರು ಇಂದು (ಭಾನುವಾರ) ಮಾಹಿತಿ ನೀಡಿದ್ದಾರೆ.243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಯ ಭಾಗವಾಗಿರುವ ಜೆಡಿ(ಯು) 103 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಕುರಿತು ಎನ್‌ಡಿಎ ಹಿರಿಯ ನಾಯಕರು ಔಪಚಾರಿಕ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.ಅಭ್ಯರ್ಥಿಗಳ ಆಯ್ಕೆ ಹಾಗೂ ಸ್ಪರ್ಧಿಸುವ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಉತ್ತಮ ಕೆಲಸ ಮಾಡದ ನಾಲ್ವರು ಹಾಲಿ ಶಾಸಕರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ 102 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!