ಡಿಕೆಶಿ ಹೇಳಿಕೆ ಮೂರ್ಖತನದ ಪರಮಾವಧಿ: ರಾಜಣ್ಣ

Picture of Savistara

Savistara

Bureau Report

ತುಮಕೂರು: ‘ಮುಖ್ಯಮಂತ್ರಿ ಆಗಬೇಕಾದರೆ ಶಾಸಕರು ಲೆಕ್ಕಕ್ಕೆ ಇಲ್ಲ. ಹೈಕಮಾಂಡ್ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿರುವುದು ಮೂರ್ಖತನದ ಪರಮಾವಧಿ’ ಎಂದು ಶಾಸಕ ಕೆ.ಎನ್‌.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು ಲೆಕ್ಕಕ್ಕೆ ಇಲ್ಲ ಎಂದು ಹೇಳುವುದು ಮೂರ್ಖತನ. ಇಂತಹ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು’ ಎಂದರು.’ಸಿದ್ದರಾಮಯ್ಯ ಅವರು ಶಾಸಕರಿಂದ ಆಯ್ಕೆಯಾಗಿ, ಮುಖ್ಯಮಂತ್ರಿ ಆಗಿದ್ದಾರೆ. ಮುಂದೆ ಮುಖ್ಯಮಂತ್ರಿ ಬದಲಾವಣೆ ವೇಳೆ ಹೈಕಮಾಂಡ್ ವೀಕ್ಷಕರನ್ನು ಕಳುಹಿಸಿ, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತದೆ. ಈ ಹಿನ್ನೆಲೆ ಇಟ್ಟುಕೊಂಡೇ ಸಿದ್ದರಾಮಯ್ಯ ಅವರು ಶಾಸಕರ ಅಭಿಪ್ರಾಯ ಮುಖ್ಯ ಎಂದಿದ್ದಾರೆ’ ಎಂದರು.ದೇವರಾಜ ಅರಸು ಶಾಸಕ ಆಗಿರದಿದ್ದರೂ ಮುಖ್ಯಮಂತ್ರಿಯಾಗಿದ್ದರು. ಇದಕ್ಕೆಲ್ಲ ಶಾಸಕರ ಅಭಿಪ್ರಾಯ, ಬೆಂಬಲವೇ ಮುಖ್ಯವಾಗಿತ್ತು ಎಂದರು.

“ಸಚಿವ ಸ್ಥಾನದಿಂದ ವಜಾ ಮಾಡಿದ ನಂತರ ಹೈಕಮಾಂಡ್‌ಗೆ ಪತ್ರ ಬರೆಯುತ್ತಲೇ ಇದ್ದೇನೆ. ಭೇಟಿಯಾಗಲು ಅವಕಾಶ ನೀಡಿಲ್ಲ. ಸಮಯಕೊಟ್ಟರೆ ಭೇಟಿಯಾಗಿ ಎಲ್ಲ ವಿಚಾರಗಳನ್ನೂ ತಿಳಿಸುತ್ತೇನೆ’ ಎಂದು ಹೇಳಿದರು.

[t4b-ticker]
error: Content is protected !!