ರಾಷ್ಟ್ರಪತಿ ದೌಪದಿ ಮುರ್ಮು ಅವರು ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22 ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ.ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಿ ಮಧ್ಯಾಹ್ನ 12:20 ರಿಂದ 1 ಗಂಟೆಯ ಒಳಗೆ ಅಯ್ಯಪ್ಪ ದರುಶನ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಶೇಷ ವಾಹನದಲ್ಲಿ ಪಂಪಾದಿಂದ ನೀಲಕ್ಕಲ್‌ಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತಿರುವನಂತಪುರಕ್ಕೆ ಮರಳಲಿದ್ದಾರೆ.
ರಾಷ್ಟ್ರಪತಿಗಳು ಅಕ್ಟೋಬರ್ 24 ರವರೆಗೆ ರಾಷ್ಟ್ರಪತಿಗಳು ಕೇರಳದಲ್ಲಿ ಇರಲಿದ್ದು ಈ ಸಮಯದಲ್ಲಿ ತಿರುವನಂತಪುರಂ ಮತ್ತು ಕೊಟ್ಟಾಯಂ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.