ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಲಾದ ಜ್ಯೇಷ್ಠ ಕಾರ್ಯಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ, ಶಿಕ್ಷಣತಜ್ಞ ಶ್ರೀ ಕೃ.ನರಹರಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರ ಸೇವಿಕಾ ಸಮಿತಿಯ ಪ್ರಮುಖ ಸಂಚಾಲಿಕಾ ವಿ.ಶಾಂತಾಕುಮಾರಿ, ಶಿಕ್ಷಣತಜ್ಞ ಡಾ॥ ಎವಿಎಸ್ ಮೂರ್ತಿ, ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದ ವಿಶ್ವಸ್ಥ ಮಂಡಳಿಯ ಗೌರವ ಕಾರ್ಯದರ್ಶಿ ನಿರ್ಮಲ್ ಕುಮಾರ್,

ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ನಾರಾಯಣ ಲಾಲ್ ಗುಪ್ತಾ, ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷ ಸಂದೀಪ್ ಬೂದಿಹಾಳ ನುಡಿನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ,

ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖ್ ಸುಧೀರ್ ಸೇರಿದಂತೆ ಅನೇಕ ಗಣ್ಯರು, ಶಿಕ್ಷಣತಜ್ಞರು, ಸಾಮಾಜಿಕ ಕಾರ್ಯಕರ್ತರು, ಕಲಾವಿದರು, ರಾಜಕೀಯ ನಾಯಕರು ಭಾಗವಹಿಸಿದರು.