ಕಾಬೂಲ್: ಪಾಕಿಸ್ತಾನ ಹಾಗೂ ಅಷ್ಣನ್ ನಡುವೆ ಸಂಘರ್ಷ ಮುಂದುವರೆದಿದ್ದು ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟರ್‌ಗಳು ಮೃತಪಟ್ಟಿದ್ದಾರೆ.
ಈ ಬಗ್ಗೆ ಅಫ್ಘಾನಿಸ್ತಾನದ ಕ್ರಿಕೆಟ್ ಮಂಡಳಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿರುವುದನ್ನು ಖಚಿತಪಡಿಸಿ ಶೋಕ ವ್ಯಕ್ತಪಡಿಸಿದೆ.
ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಪ್ಸನ್ ಕ್ಲಬ್ ಮಟ್ಟದ ಯುವ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ದಾಳಿ ನಡೆದಿದ್ದು, ಇದರಿಂದ ಮೂವರು ಕ್ರಿಕೆಟಿಗರು ಹಾಗೂ ಐವರು ನಾಗರಿಕರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಪಾಕ್ ದಾಳಿಗೆ ಮೃತಪಟ್ಟ ಕ್ರಿಕೆಟಿಗರನ್ನು ಕಬೀರ್, ಸಿಬ್ಬತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಈ ದಾಳಿ ವಿರುದ್ಧ ಅಫ್ಘಾನಿಸ್ತಾನ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಕ್ರಿಕೆಟಿಗ ರಶೀದ್ ಖಾನ್ ಕೂಡ ಪಾಕ್ ದಾಳಿಯನ್ನು ಖಂಡಿಸಿದ್ದಾರೆ. ನಾಗರಿಕರ ಮೇಲೆ ದಾಳಿ ಮಾಡಿವುದು ಸರಿಯಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪಾಕ್ ವಿರುದ್ಧ ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಅಪ್ಸನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ಡುರಾಂಡ್ ಲೈನ್ ಬಾರ್ಡ‌್ರನಲ್ಲಿ 12 ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದರು. ಇದೀಗ ಮತ್ತೊಮ್ಮೆ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ.ಈ ನಡುವೆ ಪಾಕಿಸ್ತಾನದಿಂದ ದಿಂದ 14 ಲಕ್ಷಕ್ಕೂ ಹೆಚ್ಚಿನ ಅಪ್ಲನ್ ನಿರಾಶ್ರಿತರನ್ನು ವಾಪಸು ಕಳುಹಿಸಲಾಗಿದೆ ಎಂದು ಶುಕ್ರವಾರ ಸರ್ಕಾರ ಹೇಳಿದೆ. ಇನ್ನೂ ದೇಶದಲ್ಲೇ ಉಳಿದಿರುವವರಿಗೆ ಸಮಯಾವಕಾಶದ ವಿಸ್ತರಣೆ ನೀಡಲಾಗುವುದಿಲ್ಲ. ಅವರು ಕೂಡ ವಾಪಸಾಗುವುದನ್ನು ಖಚಿತಪಡಿಸಲಾಗುವುದು ಎಂದು ಅದು ತಿಳಿಸಿದೆ.














































