ಖರ್ಗೆ-ಡಿಕೆಶಿ ರಹಸ್ಯ ಮಾತುಕತೆ

Picture of Savistara

Savistara

Bureau Report

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದ್ದಾರೆ.

ಆರೋಗ್ಯ ಕಾರಣದಿಂದ ಬೆಂಗಳೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಶಿವಕುಮಾ‌ರ್, ನಂತರ ತಮ್ಮ ಜತೆಗಿದ್ದ ಎಲ್ಲರನ್ನೂ ಹೊರಗೆ ಕಳುಹಿಸಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.’ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಬರೆದ ಪತ್ರ, ಅದಕ್ಕೆ ಪೂರಕವಾಗಿ ಸಂಪುಟ ತೆಗೆದುಕೊಂಡ ನಿರ್ಧಾರ. ನಂತರದ ಬೆಳವಣಿಗಳ ಕುರಿತು ಒಂದಷ್ಟು ಮಾತುಕತೆ ನಡೆಸಿದರು’ ಎಂದು ಪಕ್ಷದ ಮೂಲಗಳು ಹೇಳಿವೆ.ನಾಯಕತ್ವ ಬದಲಾವಣೆ ಕುರಿತು ಮೈಸೂರು ಹಾಗೂ ಹಾಸನದಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ, ಕೆಲ ಸಚಿವರು, ಶಾಸಕರ ಬಹಿರಂಗ ಮಾತುಗಳು, ಕಾಂಗ್ರೆಸ್ ಸಂಘಟನೆ, ಬಿಹಾರ ಚುನಾವಣೆ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದೂ ಹೇಳಲಾಗಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!