ಲಿಂಗಸುಗೂರು: ಆರ್‌ಎಸ್‌ಎಸ್ ಪಥಸಂಚಲನದಲ್ಲಿದ್ದ ಪಿಡಿಒ ಅಮಾನತು

Picture of Savistara

Savistara

Bureau Report

ಲಿಂಗಸುಗೂರು: ಪಟ್ಟಣದಲ್ಲಿ ಅಕ್ಟೋಬರ್ 12ರಂದು ನಡೆದಿದ್ದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಪ್ರವೀಣಕುಮಾರ ಕೆ.ಪಿ. ಅವರನ್ನು ಕೆಲಸದಿಂದ ಶುಕ್ರವಾರ ಅಮಾನತುಗೊಳಿಸಲಾಗಿದೆ.

ಶಾಸಕ ಮಾನಪ್ಪ ವಜ್ಜಲ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಪ್ರವೀಣಕುಮಾರ ಅವರು ಆರ್‌ಎಸ್‌ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಗಣವೇಷ ಧರಿಸಿ, ಪಥಸಂಚಲನದಲ್ಲಿ ಭಾಗವಹಿಸಿದ್ದರು.’ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಡಾ.ಅರುಂಧತಿ ಚಂದ್ರಶೇಖರ ಅವರು ಆದೇಶದಲ್ಲಿ ತಿಳಿಸಿದ್ದಾರೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!