ಯಾವುದೇ ಸಂಘ-ಸಂಸ್ಥೆ ನಿಷೇಧಿಸುವ ಚಿಂತನೆ ಇಲ್ಲ: ಎಚ್‌.ಕೆ.ಪಾಟೀಲ

Picture of Savistara

Savistara

Bureau Report

ಬೆಳಗಾವಿ: ‘ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಸೇರಿದಂತೆ ಯಾವುದೇ ಸಂಘ-ಸಂಸ್ಥೆ ಮತ್ತು ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾವ ಮತ್ತು ಚಿಂತನೆ ಸರ್ಕಾರದ ಮುಂದೆ ಇಲ್ಲ’ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

‘ರಾಜ್ಯದಲ್ಲಿ ಆ‌ರ್ ಎಸ್ ಎಸ್ ನಿಷೇಧಿಸಲಾಗುತ್ತದೆಯೇ’ ಎಂಬ ಸುದ್ದಿಗಾರರ ಪ್ರಶ್ನೆಗೆ, ಇಲ್ಲಿ ಶನಿವಾರ ಅವರು ಹೀಗೆ ಪ್ರತಿಕ್ರಿಯಿಸಿದರು.’ಬೆಳಗಾವಿಯಲ್ಲಿ ಈ ಬಾರಿಯೂ ಬದ್ಧತೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸುತ್ತೇವೆ. ಅದಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ’ ಎಂದರು.’ಬೆಳಗಾವಿಯಲ್ಲಿ ವಾಸಿಸುವ ಎಲ್ಲ ಭಾಷಿಕರೂ ನ.1ರಂದು ವೈಭವದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸುವವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದರು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!