ಶಿವಮೊಗ್ಗ : ದ್ವಾರಕ ಕನ್ವೆನ್ಷನ್ ಹಾಲ್ ಬಳಿ ಅವೈಜ್ಞಾನಿಕ ರಾಜ ಕಾಲುವೆ ಸಮಸ್ಯೆ | ಈಗ ಬಗೆಹರಿಸುವುದಾಗಿ ಸಂಸದ ರಾಘವೇಂದ್ರ ಬಿವೈ ಭರವಸೆ

Picture of Savistara

Savistara

Bureau Report

ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್ ಬಳಿ ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣದಿಂದ ನಗರದ ಗೋಪಾಲಗೌಡ ಬಡಾವಣೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚಿನ ಮಳೆ ಬಿದ್ದ ಸಂದರ್ಭದಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯದೇ ಮನೆಗಳಿಗೆ ನೀರು ನುಗ್ಗುವ ಪರಿಣಾಮ ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಸಮಸ್ಯೆಯ ಕುರಿತು ಸಂಸದ ರಾಘವೇಂದ್ರ ಬಿ ವೈ ಗಮನಕ್ಕೆ ತರಲಾಯಿತು.

ಮರುಕ್ಷಣವೇ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಒ. 18ರಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ತಕ್ಷಣವೇ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಪಕ್ಷದ ಪ್ರಮುಖರು, ನಿವಾಸಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!