ರೈನ್ ಅಲರ್ಟ್ : ಒಂದು ವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Picture of Savistara

Savistara

Bureau Report

ಕರಾವಳಿಯ ಉದ್ದಕ್ಕೂ ಗಂಟೆಗೆ 35 ಕಿ.ಮೀ ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಕೆಲವೆಡೆ ಇದೇ 26ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮಂಗಳವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳನ್ನೂ ಮಳೆ ವ್ಯಾಪಿಸಿಕೊಳ್ಳುವ ಸಾಧ್ಯತೆಯಿದೆ.

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಸೋಮವಾರದಿಂದ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡಿನ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಚ್ಚರಿಕೆ: ಸೋಮವಾರದಿಂದ ಗುರುವಾರದವರೆಗೂಕರಾವಳಿಯ ಉದ್ದಕ್ಕೂ ಗಂಟೆಗೆ 35 ಕಿ.ಮೀ ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಕೆಲವೆಡೆ ಇದೇ 26ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮಂಗಳವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳನ್ನೂ ಮಳೆ ವ್ಯಾಪಿಸಿಕೊಳ್ಳುವ ಸಾಧ್ಯತೆಯಿದೆ.

[t4b-ticker]
error: Content is protected !!