ಅಸ್ಸಾಂ | ಲವ್ ಜಿಹಾದ್‌ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ

Picture of Savistara

Savistara

Bureau Report

ಗುವಾಹಟಿ: ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಬಹುಪತ್ನಿತ್ವವನ್ನುತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ಸಚಿವ ಸಂಪುಟದಿಂದ ಕರಡು ಮಸೂದೆಗೆ ಅನುಮತಿ ಸಿಕ್ಕ ನಂತರ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಲವ್ ಜಿಹಾದ್, ಬಹುಪತ್ನಿತ್ವ ತಡೆ, ಸತ್ರ( ವೈಷ್ಣವ ಮಠ)ಗಳ ಸಂರಕ್ಷಣೆ ಹಾಗೂ ಬುಡಕಟ್ಟು ಜನಾಂಗದ ಭೂ ಹಕ್ಕುಗಳ ಕುರಿತ ಮಸೂದೆಗಳನ್ನು ಮಂಡಿಸಲಾಗುತ್ತಿದೆ. ಇದು ಐತಿಹಾಸಿಕ ಘಟನೆಯಾಗಲಿದೆ ಎಂದು ಹೇಳಿದ್ದಾರೆ.ಆದರೆ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಟ್ಟುಕೊಡಲಿಲ್ಲ.

ಮುಂದಿನ ತಿಂಗಳಲ್ಲಿ ಅಸ್ಸಾಂ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದ್ದು, ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!