ತಂದೆ ರಾಜಕೀಯದ ಸಂಧ್ಯಾಕಾಲದಲ್ಲಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

Picture of Savistara

Savistara

Bureau Report

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುರಾಜಕೀಯದ ಸಂಧ್ಯಾಕಾಲದಲ್ಲಿದ್ದಾರೆ ಎಂದು ಅವರ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನವೆಂಬರ್ ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವಾಗಲೇ ಅವರಿಂದ ಈ ರೀತಿಯ ಹೇಳಿಕೆ ಬಂದಿದೆ.

ಆದರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಆ ಬಳಿಕ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.’ಅವರು ರಾಜಕೀಯದ ಸಂಧ್ಯಾಕಾಲಯದಲ್ಲಿದ್ದಾರೆ. ಇಂತಹ ಸಮಯದಲ್ಲಿ ಪ್ರಗತಿಪರ ಚಿಂತನೆ ಹೊಂದಿರುವವರಿಗೆ, ಸೈದ್ಧಾಂತಿಕವಾಗಿ ಮಾರ್ಗದರ್ಶನ ನೀಡಲು ಮತ್ತು ಮುನ್ನಡೆಸಲು ಒಬ್ಬ ನಾಯಕನ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಜಾರಕಿಹೊಳಿ ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಮರ್ಥರು. ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇರುವ ನಾಯಕರಿಗೆ ಹಾಗೂ ಯುವಕರಿಗೆ ಅವರು ಮಾದರಿ’ ಎಂದು ಹೇಳಿದ್ದಾರೆ.’ಸಿದ್ಧಾಂತಬದ್ಧವಾದ ರಾಜಕಾರಣಿಗಳು ಇರುವುದು ವಿರಳ. ಆದರೆ ಜಾರಕಿಹೊಳಿಯವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರು ಆ ಕೆಲಸವನ್ನು ಮುಂದುವರಿಸಬೇಕು’ ಎಂದು ಹೇಳಿದ್ದಾರೆ.

ಅವರ ಈ ಹೇಳಿಕೆ ಒಂದು ವೇಳೆ ನಾಯಕತ್ವ ಬದಲಾಗುವ ಸನ್ನಿವೇಶ ಬಂದರೆ ಸಿದ್ದರಾಮಯ್ಯ ಬಣ ಸತೀಶ್ ಜಾರಕಿಹೊಳಿಯವರ ಹೆಸರನ್ನು ಮುನ್ನಲೆಗೆ ತರಬಹುದು ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಹೇಳಿದರು.

[t4b-ticker]
error: Content is protected !!