ಮಡಿಕೇರಿ: ಗೋಲ್ಡನ್ ಬುಕ್ ಸೇರಿದ ಬಾಲಕಿ ಸಿಂಚನಾ ಯೋಗ ಪ್ರದರ್ಶನ

Picture of Savistara

Savistara

Bureau Report

ಮಡಿಕೇರಿ: ತಾಲ್ಲೂಕಿನ ಮದೆನಾಡು ಗ್ರಾಮದ ಬಿಜಿಎಸ್‌ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಮಂಗಳವಾರ ಶಾಲೆಯ ಸಭಾಂಗಣದಲ್ಲಿ ಪ್ರದರ್ಶಿಸಿದ 3 ಯೋಗ ಪ್ರದರ್ಶನಗಳು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಪುಟ ಸೇರಿದವು.

ಡಿಂಬಾಸನ ಭಂಗಿಯಲ್ಲಿ 1 ನಿಮಿಷಕ್ಕೆ 10 ಸುತ್ತು ಬರುವ ಗುರಿ ನಿಗದಿ ಮಾಡಲಾಗಿತ್ತು. ಆದರೆ, ಸಿಂಚನಾ ನಿಮಿಷಕ್ಕೆ 15 ಸುತ್ತು ಬರುವ ಮೂಲಕ ಅಚ್ಚರಿ ಮೂಡಿಸಿದಳು. ಖಂಡಪೀಡಾಸನ ಭಂಗಿಯಲ್ಲಿ 1 ನಿಮಿಷ ಇರುವ ಗುರಿ ಇತ್ತು. ಆದರೆ, 1.44 ನಿಮಿಷ ಇರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು. ಧನುರಾಸನ ಭಂಗಿಯಲ್ಲಿ ಒಂದು ನಿಮಿಷಕ್ಕೆ 18 ಬಾರಿ ಸುತ್ತುವ ಮೂಲಕ ಅಂತರರಾಷ್ಟ್ರೀಯ ದಾಖಲೆ ನಿರ್ಮಿಸಿದಳು.ಈ ಮೂರು ದಾಖಲೆಗಳನ್ನು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಏಷ್ಯಾ ವಿಭಾಗದ ಮುಖ್ಯಸ್ಥ ಮನಿಷ್ ವೈಶ್ಲೋಯಿ ದೃಢಪಡಿಸಿದರು. ಆದಿಚುಂಚಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪ್ರಮಾಣಪತ್ರ ವಿತರಿಸಿದರು.ಇಲ್ಲಿಯವರೆಗೆ ಸಿಂಚನಾ ಅಂತರರಾಷ್ಟ್ರೀಯ ಮಟ್ಟದ ಇಂಟರ್‌ನ್ಯಾಷನಲ್ ಬುಕ್‌ ಆಫ್ ರೆಕಾರ್ಡ್‌ನಲ್ಲಿ 2, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ 8, ರಾಷ್ಟ್ರಮಟ್ಟದ ಇಂಡಿಯ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ 1 ಹಾಗೂ ರಾಜ್ಯಮಟ್ಟದ ಕರ್ನಾಟಕ ಅಚೀವರ್ಸ್ ಬುಕ್ ಆಫ್‌ ರೆಕಾರ್ಡ್‌ನಲ್ಲಿ 1 ದಾಖಲೆಯನ್ನು ನಿರ್ಮಿಸಿದ್ದಾಳೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!