ಶಿವಮೊಗ್ಗ: ಪ್ರಗತಿ ಪರಿಶೀಲನಾ ಸಭೆ

Picture of Savistara

Savistara

Bureau Report

ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಶಿವಮೊಗ್ಗ ಜಿಲ್ಲೆಯಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದು ಇದರ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ವಿವಿಧ ಇಲಾಖೆಗಳಿಂದ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆ,

ಕಾರ್ಯಕ್ರಮಗಳು, ಸೌಲಭ್ಯಗಳ ಕುರಿತು ಸಮಿತಿಯ ಅಧ್ಯಕ್ಷರಾದ ಎಂ.ಆರ್ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ “ಪ್ರಗತಿ ಪರಿಶೀಲನಾ ಸಭೆ” ನಡೆಸಿ ಚರ್ಚಿಸಲಾಯಿತು.

ಈ ವೇಳೆ ಸಮಿತಿಯ ಸದಸ್ಯರುಗಳು ಮತ್ತು ಶಾಸಕರುಗಳಾದ ಎಸ್.ಎನ್ ಚನ್ನಬಸಪ್ಪ ಅವರು, ಗೋಪಾಲ ಕೃಷ್ಣ ಬೇಳೂರು ಅವರು, ಗುರುರಾಜ್ ಗಂಟಿಹೊಳೆ ಅವರು, ಡಾಕ್ಟರ್ ಧನಂಜಯ ಸರ್ಜಿ, ಜಿ.ಎಸ್ ಶ್ರೀನಿವಾಸ್ ಅವರು, ವಿಧಾನ ಪರಿಷತ್ ಸದಸ್ಯರುಗಳಾದ ಅಬ್ದುಲ್ ಜಬ್ಬರ್ ಅವರು,

ಬಲ್ಕಿಶ್ ಭಾನು ಅವರು, ಎಫ್.ಹೆಚ್ ಜಕಪ್ಪನವರ್ ಅವರು, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು, ಜಿಲ್ಲಾ ಪಂಚಾಯತ್ ಸಿ.ಇ.ಓ ಹೇಮಂತ್ ಕುಮಾರ್ ಅವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]
error: Content is protected !!