ಮುಂಬೈ ಅ. 30: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ನಲ್ಲಿ ಗುರುವಾರ ಭಾರತ ತಂಡವು ರೋಚಕ ಹಣಾಹಣಿಯಲ್ಲಿ ಆಸ್ಟ್ರೇಲಿಯ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಆ ಮೂಲಕ ಟೂರ್ನಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಸೋತು ಹೊರಬಿದ್ದಿತು.ದಲ್ಲಿ ಟಾಸ್ ಗೆದ್ದ ನವೀ ಮುಂಬೈಯ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ ನಡೆದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಸ್ಪೋಟಕ ಆರಂಭ ಪಡೆದ ಆಸ್ಟ್ರೇಲಿಯಾ ತಂಡವು 49.5 ಓವರ್ ಗಳಲ್ಲಿ 338 ರನ್ ಗಳಿಸಿ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಭಾರತ ತಂಡವು 9 ಎಸೆತ ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 341 ರನ್ ಗಳಿಸಿ ಫೈನಲ್ ಪ್ರವೇಶಿಸಿತು.
ವಿಶ್ವಕಪ್ | ಆಸ್ಟ್ರೇಲಿಯದ ಅಜೇಯ ಓಟಕ್ಕೆ ಬ್ರೇಕ್ : ಭಾರತದ ಮಹಿಳಾ ತಂಡ ಫೈನಲ್ ಗೆ
Savistara
Bureau Report
[t4b-ticker]














































