ಶ್ರೀಕಾಕುಳಂ ಕಾಲ್ತುಳಿತ:ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪಿಎಂಒ

Picture of Savistara

Savistara

Bureau Report

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ಘೋಷಿಸಿದೆ.

ಇಂದು

ಬೆಳಿಗ್ಗೆ 11:30ರ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನ ಮಂದಿ ಮಹಿಳೆಯರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಬಗ್ಗೆ ತಿಳಿದು ಬಹಳ ನೋವು ಅನುಭವಿಸಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!