ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗುವ ಬೆಳ್ಳಿರಥ ಇಂದು ಸುಳ್ಯದೆಡೆಗೆ ಪ್ರಯಾಣ: ರಥಯಾತ್ರೆಗೆ ಸಂಭ್ರಮದ ಚಾಲನೆ

Picture of Savistara

Savistara

Bureau Report

ಸುಳ್ಯ: ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಬೆಳ್ಳಿರಥ ಯಾತ್ರೆ ಕೋಟೇಶ್ವರದಿಂದ ಆರಂಭಗೊಂಡಿದೆ. ಸೋಮವಾರ ರಾತ್ರಿ ಗುತ್ತಿಪೂಜೆ ನಡೆದು ರಥವನ್ನು

ಶಾಸ್ರೋಕ್ತವಾಗಿ ಡಾ.ರೇಣುಕಾಪ್ರಸಾದ್ ಕೆ.ವಿ. ಹಾಗೂ ಮನೆಯವರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಿಗ್ಗೆ ಬೆಳ್ಳಿ ರಥಯಾತ್ರೆ ಸುಳ್ಯದ ಕಡೆಗೆ ಪ್ರಯಾಣ ಆರಂಭಿಸಿದೆ. ರಥಯಾತ್ರೆಗೆ ಉಡುಪಿ, ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.ಡಾ.ರೇಣುಕಾಪ್ರಸಾದ್ ಕೆ.ವಿ, ಡಾ.ಜ್ಯೋತಿ ಆ‌ರ್.ಪ್ರಸಾದ್‌, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕೋಟೇಶ್ವರದ ರಥ ಶಿಲ್ಪಿ ಕೋಟೇಶ್ವರ ಬಿ. ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಪುತ್ರ ರಾಜಗೋಪಾಲಾಚಾರ್ಯ ಸೇರಿ ಹಲವು ಮಂದಿ ಪ್ರಮುಖರು ಉಪಸ್ಥಿತರಿದ್ದರು.

ಬಳಿಕ ಕೊಟ್ಟೇಶ್ವರದ ಮಹತೋಭಾರ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿವಿಶೇಷ ಪೂಜೆ ಸಲ್ಲಿಸಿ ರಥಯಾತ್ರೆ ಸುಳ್ಯದ ಕಡೆಗೆ ಹೊರಟಿತು.ಶಾಸಕ ಕಿರಣ್ ಕೊಡ್ಲಿ ಅವರು ಇಲ್ಲಿ ರಥಯಾತ್ರೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಮತ್ತಿತರರು ಆಗಮಿಸಿ ಪುಷ್ಪಾರ್ಚನೆ ನಡೆಸಿ ಶುಭ ಹಾರೈಸಿದರು. ಕೋಟೇಶ್ವರದಿಂದ ಆರಂಭಗೊಂಡ ಬೆಳ್ಳಿರಥ ಯಾತ್ರೆ ಕುಂಭಾಶಿ-ಉಡುಪಿ- ಸುರತ್ಕಲ್‌- ಮಂಗಳೂರು-ಬಿಸಿ ರೋಡ್-ಕಬಕ-ಪುತ್ತೂರು- ಕುಂಬ್ರ- ಕನಕಮಜಲು-ಜಾಲ್ಲೂರು ಪೈಚಾ‌ರ್ ಮೂಲಕ ಹಾದು ಬಂದು ವಿವಿಧ ಧಾರ್ಮಿಕ

ಕ್ಷೇತ್ರಗಳಲ್ಲಿ ಸ್ವಾಗತವನ್ನು ಸ್ವೀಕರಿಸಿ ಸಾಯಂಕಾಲ ಸುಳ್ಯಕ್ಕೆ ಆಗಮಿಸಲಿದೆ. ಪೈಚಾರು ಬಳಿ ಪೂರ್ಣಕುಂಭದ ಮೂಲಕ ಸ್ವಾಗತಿಸಲಾಗುತ್ತದೆ. ಭವ್ಯವಾದ ಮೆರವಣಿಗೆ ಮೂಲಕ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಆಗಮಿಸಿ ಬಳಿಕ ಶ್ರೀ ಕ್ಷೇತ್ರ ಗುತ್ಯಮ್ಮನ ಸನ್ನಿಧಿಯಲ್ಲಿ ರಾತ್ರಿ ತಂಗಲಿದೆ.ನ.5ರಂದು ಪೂ.8ರಂದು ಶ್ರೀ ಗುತ್ಯಮ್ಮ ಕ್ಷೇತ್ರದಿಂದ ಹೊರಟು ಬೆಳ್ಳಿರಥ ಯಾತ್ರೆ ಕೆವಿಜಿ ಸರ್ಕಲ್ ಬಳಿಯಿಂದ ವಿವಿಧ ವೈಧಿಕ ಮತ್ತು ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೊರಡಲಿದೆ.ಬೆಳ್ಳಿರಥವನ್ನು ನ.10ರಂದು ಶಾಸ್ರೋಕ್ತವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಾಗುತ್ತದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!