ವಿಶ್ವಕಪ್ ವಿಜೇತ ವನಿತೆಯರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

Picture of Savistara

Savistara

Bureau Report

ನವದೆಹಲಿ: ದಕ್ಷಿಣ ಆಫ್ರಿಕಾವನ್ನು ಮಣಿಸಿ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ವನಿತಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ನ.5) ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.ಎಕ್ಸ್‌ನಲ್ಲಿ ಕಪ್‌ ವಿಜೇತ ತಂಡವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಈ ಗೆಲುವು ಭಾರತದ ಅದೆಷ್ಟೋ ಯುವಜನರಿಗೆ ಸ್ಫೂರ್ತಿಯಾಗಿದೆ ಎಂದಿದ್ದಾರೆ.

ಎಮರ್ಜಿಂಗ್ ಸೈನ್ಸ್, ಟೆಕೋಲೊಜಿ ಆಂಡ್ ಇನೋವೇಶನ್ ಕೋಂಪ್ಲೇವ್ (ESTIC) 2025 ರಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಈ ಕಾರ್ಯಕ್ರಮವು ವಿಜ್ಞಾನಕ್ಕೆ ಸಂಬಂಧಿಸಿದೆ. ಆದರೆ ಮೊದಲು, ಕ್ರಿಕೆಟ್‌ನಲ್ಲಿ ಭಾರತದ ಅದ್ಭುತ ಗೆಲುವಿನ ಬಗ್ಗೆ ಮಾತನಾಡುತ್ತೇನೆ. ಇಡೀ ಭಾರತವು ವಿಶ್ವಕಪ್ ಗೆದ್ದ ಖುಷಿಯಲ್ಲಿದೆ. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್. ಈ ಸಂದರ್ಭ ನಮ್ಮ ಮಹಿಳಾ ಕ್ರಿಕೆಟ್ ತಂಡವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ. ನಿಮ್ಮ ಯಶಸ್ಸು ದೇಶಾದ್ಯಂತ ಲಕ್ಷಾಂತರ ಯುವಕರಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದರು.ಟೀಮ್ ಇಂಡಿಯಾ ಗೆಲುವಿನ ಬಳಿಕ, ಪ್ರಧಾನಿ ಮೋದಿ ಭಾನುವಾರ (ನ.2) ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಹರ್ಮನ್‌ಪ್ರೀತ್‌ ನೇತೃತ್ವದ ತಂಡವನ್ನು ಅಭಿನಂದಿಸಿದರು.”ಐಸಿಸಿ ವನಿತಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ಸ್‌ನಲ್ಲಿ ಭಾರತ ತಂಡದ ಅದ್ಭುತ ಗೆಲುವು. ಫೈನಲ್‌ನಲ್ಲಿ ಅವರ ಆಟದಲ್ಲಿ ಬಹಳಷ್ಟು ಆತ್ಮವಿಶ್ವಾಸವಿತ್ತು. ತಂಡವು ಆಟದ ಕೊನೆಯವರೆಗೂ ಅವರ ಒಗ್ಗಟ್ಟು ಮತ್ತು ದೃಢತೆಯನ್ನು ತೋರಿಸಿತು. ನಮ್ಮ ಆಟಗಾರರಿಗೆ ಅಭಿನಂದನೆಗಳು. ಈ ಗೆಲುವು ಭವಿಷ್ಯದ ಚಾಂಪಿಯನ್‌ಗಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ” ಎಂದು ಪ್ರಧಾನಿ ಎಕ್ಸ್ ಪೋಸ್ಟ್ ಮಾಡಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!