ವಾರಾಣಸಿ: ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ

Picture of Savistara

Savistara

Bureau Report

ವಾರಾಣಸಿ: ವಾರಾಣಸಿಯಿಂದ ಮುಂಬೈಗೆ ಹೊರಟಿದ್ದ ಆಕಾಸಏರ್‌ಲೈನ್ಸ್ ವಿಮಾನ ಟೇಕ್‌ಆಫ್ ಆಗುವ ಮೊದಲು ಪ್ರಯಾಣಿಕನೊಬ್ಬ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

QP 1497 ವಿಮಾನವು ಸೋಮವಾರ ಸಂಜೆ 6.45ಕ್ಕೆ ಲಾಲ್ ಬಹದ್ದೂ‌ರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿತ್ತು. ವಿಮಾನ ರನ್‌ವೇನಲ್ಲಿ ಸಾಗುತ್ತಿದ್ದಾಗ ಸುಜಿತ್ ಸಿಂಗ್ ಎನ್ನುವ ಪ್ರಯಾಣಿಕ ತುರ್ತು ನಿರ್ಗಮನದ ದ್ವಾರವನ್ನು ತೆಗೆಯಲು ಯತ್ನಿಸಿದ್ದಾನೆ. ತಕ್ಷಣವೇ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಎಟಿಸಿಗೆ ಮಾಹಿತಿ ನೀಡಿ ವಿಮಾನವನ್ನು ನಿಲ್ಲಿಸಿದ್ದಾರೆ.ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ, ಸುಜಿತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ‘ಕುತೂಹಲಕ್ಕಾಗಿ ಬಾಗಿಲು ತೆಗೆಯಲು ಯತ್ನಿಸಿದ್ದೇನೆ’ ಎಂದು ಸುಜಿತ್ ಹೇಳಿರುವುದಾಗಿ ಎಸ್‌ಎಚ್‌ಒ ಮಾಹಿತಿ ನೀಡಿದ್ದಾರೆ.ಬಳಿಕ ಸಂಜೆ 7.45ಕ್ಕೆ ವಿಮಾನ ಹಾರಾಟ ಆರಂಭಿಸಿತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!