ಬಿಹಾರ | ಅಸಹಾಯಕ, ಭಯದ ನೆರಳಿನಿಂದ ಮಹಿಳೆಯರನ್ನು ಮೇಲೆತ್ತಿದ NDA: ಸ್ಮೃತಿ ಇರಾನಿ

Picture of Savistara

Savistara

Bureau Report

ಪಟ್ನಾ: ಬಿಹಾರದ ಎನ್‌ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಮೇಲೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮಂಗಳವಾರ ಪ್ರತಿಪಾದಿಸಿದ್ದಾರೆ.

ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿರುವ ಅವರು, ‘ಜನ್ ಧನ್ ಯೋಜನೆ’ ಮೂಲಕ ಬಿಹಾರದ 3 ಕೋಟಿಗೂ ಹೆಚ್ಚು ಮಹಿಳೆಯರಿಗೆ ನೆರವು ಸಿಕ್ಕಿದೆ. ಜತೆಗೆ 1.16 ಕೋಟಿ ಮಹಿಳೆಯರು ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಪ್ರತಿ ಮನೆಗೆ ಶೌಚಾಲಯ ನಿರ್ಮಿಸುವ ಭರವಸೆಯನ್ನು ಈಡೇರಿಸಿದ್ದೇವೆ ಎಂದರು.’ಒಂದು ಕಡೆ ಎನ್‌ಡಿಎ ಸರ್ಕಾರ ಬಿಹಾರದ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸುತ್ತಿದ್ದರೆ, ಮತ್ತೊಂದೆಡೆ, ಆರ್‌ಜೆಡಿ ನಾಯಕರು ಸವಲತ್ತುಗಳನ್ನು ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಲಿಖಿತ ಪ್ರಸ್ತಾವನೆಯನ್ನು ನೀಡಿದ್ದಾರೆ. ಆರ್‌ಜೆಡಿಯ ಈ ನಡೆ ನೋವುಂಟು ಮಾಡಿದೆ’ ಎಂದು ವಿಷಾದಿಸಿದರು.ಮಹಿಳಾ ರೋಜ್‌ಗಾರ್ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಹಣವನ್ನು ವರ್ಗಾಯಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಆರ್‌ಜೆಡಿ ಸಂಸದ ಮನೋಜ್ ಝಾ ಅವರು ಅ.31ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!