ಬಂಧನದ ಕಾರಣವನ್ನು ಲಿಖಿತವಾಗಿ, ಅರ್ಥವಾಗುವ ಭಾಷೆಯಲ್ಲಿ ಒದಗಿಸಿ: ಸುಪ್ರೀಂಕೋರ್ಟ್

Picture of Savistara

Savistara

Bureau Report

ನವದೆಹಲಿ: ಅಪರಾಧದ ಸ್ವರೂಪ ಮತ್ತು ಕಾನೂನಿನ ಸ್ವರೂಪವನ್ನು ಲೆಕ್ಕಿಸದೆ, ಬಂಧನಕ್ಕೊಳಗಾದ ಪ್ರತಿಯೊಬ್ಬ ವ್ಯಕ್ತಿಗೂ ಬಂಧನದ ಕಾರಣಗಳನ್ನು ಲಿಖಿತವಾಗಿ ಮತ್ತು ಅವರು ಅರ್ಥ ಮಾಡಿಕೊಳ್ಳುವ ಭಾಷೆಯಲ್ಲಿ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನೀಡಿದ ತನ್ನ ಮಹತ್ವದ ತೀರ್ಪಿನಲ್ಲಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸೀಹ್ ಅವರ ಪೀಠವು ಈ ಆದೇಶವನ್ನು ನೀಡಿದೆ.ಅದಾಗ್ಯೂ, ಬಂಧನಕ್ಕೆ ಮೊದಲು ಅಥವಾ ನಂತರ ತಕ್ಷಣವೆ ಬಂಧನಕ್ಕೆ ಕಾರಣಗಳನ್ನು ಲಿಖಿತವಾಗಿ ಒದಗಿಸದಿದ್ದರೆ, ಸರಿಯಾದ ಸಮಯದೊಳಗೆ ಮತ್ತು ಬಂಧನಕ್ಕೊಳಗಾದ ವ್ಯಕ್ತಿಯನ್ನು ಯಾವುದೇ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಎರಡು ಗಂಟೆಗಳ ಮೊದಲು ಲಿಖಿತವಾಗಿ ಒದಗಿಸಿದರೆ ಆದೇಶದ ಉಲ್ಲಂಘನೆ ಮಾಡಿದಂತೆ ಆಗುವುದಿಲ್ಲ ಎಂದು ಹೇಳಿದೆ.2024ರ ಜುಲೈನಲ್ಲಿ ಮುಂಬೈನಲ್ಲಿ ನಡೆದ ಬಿಎಂಡಬ್ಲ್ಯೂ ‘ಹಿಟ್ ಆ್ಯಂಡ್ ರನ್’ ಘಟನೆಗೆ ಸಂಬಂಧಿಸಿದ ಮಿಹಿರ್ ರಾಜೇಶ್ ಶಾ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!