ಆಸ್ತಿ, ಅಧಿಕಾರ ದುರ್ಬಳಕೆ: ತರಳಬಾಳು ಶ್ರೀಗೆ ಹೈಕೋರ್ಟ್ ನೋಟಿಸ್

Picture of Savistara

Savistara

Bureau Report

ಬೆಂಗಳೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಆಸ್ತಿ ಹಾಗೂಅಧಿಕಾರ ದುರ್ಬಳಕೆ, ಟ್ರಸ್ಟ್ ಡೀಡ್ ರದ್ದು ಸೇರಿದಂತೆ ಹಲವು ಆರೋಪಗಳಿಗೆ ಸಂಬಂಧಿಸಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಅಸಲು ದಾವೆಯಲ್ಲಿ ನೀಡಲಾಗಿರುವ ಮಧ್ಯಂತರ ಅರ್ಜಿಗಳ ಮೇಲಿನ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಹಿರೇಕೆರೂರಿನ ಎಸ್.ಎಸ್.ಪಾಟೀಲ್ ಸೇರಿದಂತೆ ಒಟ್ಟು 8 ಜನ ಸಲ್ಲಿಸಿರುವ ರಿಟ್ ಅರ್ಜಿಯನ್ನು (ಡಬ್ಲ್ಯು.ಪಿ 28891/2025) ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.ಅರ್ಜಿದಾರರು: ಹಿರೇಕೆರೂರಿನ ಎಸ್.ಎಸ್.ಪಾಟೀಲ್ (80)ಮತ್ತು ಸುಭಾಷ್‌ಚಂದ್ರ (61), ಹೊನ್ನಾಳಿ ತಾಲ್ಲೂಕು ಬಿದರಗದ್ದೆಯ ಬಿ.ಎಚ್‌.ಮಂಜಪ್ಪ (68), ಬೆಂಗಳೂರಿನ ಎಂ.ಶಿವಕುಮಾರಸ್ವಾಮಿ (68), ಜಿ.ಎಂ.ಲಿಂಗರಾಜು (67), ಟಿ.ಪಿ.ಕಲ್ಲೇಶ್ (62), ಪಿ.ಕಾಂತರಾಜ್ (54) ಹಾಗೂ ಎಸ್.ಶಿವಕುಮಾ‌ರ್ ಮಾಳಿಗೆ (56).ಪ್ರತಿವಾದಿಗಳು: ತರಳಬಾಳು ಜಗದ್ಗುರು ಬೃಹನ್ಮಠದ ಹಾಲಿಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀಮಠದ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಕೆ.ಆ‌ರ್.ಜಯದೇವಪ್ಪ, ಶ್ರೀ ತರಳಬಾಳು ವಿದ್ಯಾಸಂಸ್ಥೆ ಅಧ್ಯಕ್ಷ ಎಚ್‌.ಕರಿಬಸಪ್ಪ.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ ವಾದ ಮಂಡಿಸಿದರು. ಹೈಕೋರ್ಟ್ ವಕೀಲ ಕೆ.ಶ್ರೀಕಾಂತ್‌ ಪಾಟೀಲ್‌ ಅರ್ಜಿದಾರರ ಪರ ವಕಾಲತ್ತು ವಹಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!