ಭೂ ಕಬಳಿಕೆ ಆರೋಪ; ಮೊಮ್ಮಗ ಪಾರ್ಥ್ ವಿರುದ್ಧ ತನಿಖೆಯಾಗಲಿ: ಶರದ್ ಪವಾರ್

Picture of Savistara

Savistara

Bureau Report

ಮುಂಬೈ: ತಮ್ಮ ಮೊಮ್ಮಗ ಪಾರ್ಥ್ ಪವಾರ್ (ಅಜಿತ್ ಪವಾರ್ಪುತ್ರ) ವಿರುದ್ಧ ಕೇಳಿ ಬಂದ ಭೂ ವ್ಯವಹಾರ ಆರೋಪದ ಬಗ್ಗೆ ಮೌನ ಮುರಿದ ಎನ್‌ಸಿಪಿ (ಶರದ್) ಮುಖ್ಯಸ್ಥ ಶರದ್ ಪವಾರ್, ಈ ಆರೋಪದ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಂಪೂರ್ಣ ತನಿಖೆ ನಡೆಸಬೇಕು ಹಾಗೂ ಅದರ ಫಲಿತಾಂಶವನ್ನು ಸಾರ್ವಜನಿಕಗೊಳಿಸಬೇಕು ಎಂದು ತಿಳಿಸಿದ್ದಾರೆ.ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಈ ಆರೋಪವನ್ನು ಗಂಭೀರ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ಅದರ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆಗಳನ್ನು ಜನರ ಮುಂದೆ ಇಡಬೇಕು ಶರದ್ ಪವಾರ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪಾರ್ಥ್ ಮೇಲಿನ ಆರೋಪವೇನು?

ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ ಸುಮಾರು ₹1,800 ಕೋಟಿ ಮೌಲ್ಯದ 40 ಎಕರೆ ಜಮೀನನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ, ಪಾರ್ಥ್ ಪವಾರ್ ಒಡೆತನದ ಕಂಪನಿ ಕೇವಲ ₹300 ಕೋಟಿಗೆ, ಮುದ್ರಾಂಕ ಶುಲ್ಕವನ್ನೂ ಪಾವತಿಸದೆ ಅಕ್ರಮವಾಗಿ ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.’ಪಾರ್ಥ್ ತಪ್ಪು ಮಾಡುತ್ತಾನೆ ಎಂದು ನನಗೆ ಅನಿಸುತ್ತಿಲ್ಲ’ ಎಂಬ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪವಾರ್‌, ‘ಇದು ಅವರ ಅಭಿಪ್ರಾಯ’ ಎಂದರು.

ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ ಫಡ್ನವಿಸ್

ಭೂ ಕಬಳಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!