ಐರನ್ ಮ್ಯಾನ್ ಆದ ಮಾಜಿ ಐಪಿಎಸ್, ಬಿಜೆಪಿ ನಾಯಕ ಅಣ್ಣಾಮಲೈ

Picture of Savistara

Savistara

Bureau Report

ಬೆಂಗಳೂರು: ಗೋವಾದಲ್ಲಿ ನಡೆದ ಐರನ್‌ ಮ್ಯಾನ್ 70.3 ಓಟದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಎರಡನೇ ಬಾರಿ ಭಾಗಿಯಾಗಿ ಸ್ಪರ್ಧೆ ಪೂರ್ಣಗೊಳಿಸಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ಈ ಐರನ್‌ಮ್ಯಾನ್ 70.3ನಲ್ಲಿ ಭಾಗಿಯಾಗಿ ಸ್ಪರ್ಧೆ ಪೂರ್ಣಗೊಳಿಸಿದ್ದಾರೆ.ಸ್ಪರ್ಧೆಯು, 1.9 ಕಿ.ಮೀ ಈಜು, 90ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟ ಒಳಗೊಂಡಿತ್ತು. ಇದನ್ನು ತೇಜಸ್ವಿ ಸೂರ್ಯ ಅವರು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ.ಮೊದಲ ಬಾರಿ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಅಣ್ಣಾಮಲೈ ಅವರು 8 ಗಂಟೆ 13 ನಿಮಿಷಗಳಲ್ಲಿ ಸ್ಪರ್ಧೆಯ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ತೇಜಸ್ವಿ ಸೂರ್ಯ ಅವರು ಅಣ್ಣಾಮಲೈ ಜತೆಗಿನ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ. “ಅಣ್ಣಾಮಲೈ ಅವರೊಂದಿಗೆ ಭಾಗವಹಿಸಿದ್ದರಿಂದ ನನ್ನ ಎರಡನೇ ಐರನ್‌ ಮ್ಯಾನ್ 70.3 ಗೆ ಒಂದು ಬಲವಾದ ಮುಕ್ತಾಯ ಸಿಕ್ಕಿದೆ. ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ #FitIndia ಕರೆ ಯುವಕರಲ್ಲಿ ಆರೋಗ್ಯ, ಶಿಸ್ತು ಮತ್ತು ದೃಢ ಸಂಕಲ್ಪದ ಅಲೆಯನ್ನು ಪ್ರೇರೇಪಿಸುತ್ತಿದೆ’ ಎಂದಿದ್ದಾರೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!