ಕುಕ್ಕೆ ಸುಬ್ರಹ್ಮಣ್ಯ: ಡಾ.ರೇಣುಕಾಪ್ರಸಾದ್ ರಿಂದಲೇ ನೆರವೇರಿದ ಪ್ರಥಮ ಬೆಳ್ಳಿರಥೋತ್ಸವ ಸೇವೆ

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥವನ್ನು ಸಮರ್ಪಿಸಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ ಬಿ ಟೀಮ್ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ರವರು ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮವಾಗಿ ಬೆಳ್ಳಿರಥೋತ್ಸವ ಸೇವೆ ನೆರವೇರಿಸುತ್ತಿದ್ದಾರೆ. ಡಾ.ರೇಣುಕಾಪ್ರಸಾದರು, ಅವರ ಪತ್ನಿ ಡಾ.ಜ್ಯೋತಿ ರೇಣುಕಾಪ್ರಸಾದರು, ಪುತ್ರಿ ಡಾ.ಅಭಿಜ್ಞಾ ಹಾಗೂ ಅಳಿಯ ಗೋಕುಲ್, ಪುತ್ರ ಮೌರ್ಯ ಆರ್.ಪ್ರಸಾದ್, ಅತ್ತೆ, ಮಾವ, ಅವರ ಶಿಕ್ಷಣ ಸಂಸ್ಥೆಗಳ ವಿವಿಧ ಸಮಿತಿಗಳ ಪ್ರಮುಖರು, ಉದ್ಯೋಗಿಗಳು, ಹಲವು ವಿದ್ಯಾರ್ಥಿಗಳು ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ನಿರ್ವಹಿಸುತ್ತಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟರು, ಹಲವು ಮುಖಂಡರು ಉಪಸ್ಥಿತರಿದ್ದು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.ಆರಂಭದಲ್ಲಿ ದೇವಳದ ಒಳಭಾಗದ ಅಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ದೇವರ ಬಲಿ ನಡೆಸಲಾಯಿತು. ಬಳಿಕ ಬೆಳ್ಳಿರಥದಲ್ಲಿ ದೇವರನ್ನು ಕೂರಿಸಿ, ತೇರನ್ನು ಎಳೆಯಲಾಯಿತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!