ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Picture of Savistara

Savistara

Bureau Report

ಬೆಳ್ತಂಗಡಿ :(ನ. 10) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!