ನ.19ರಂದು ವಾಜಪೇಯಿ ಜನ್ಮ ಶತಮಾನೋತ್ಸವ ಪ್ರಯುಕ್ತ ಸುಳ್ಯದಲ್ಲಿ ಅಟಲ್ ವಿರಾಸತ್‌-ಸಮಾವೇಶ: ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯರಿಂದ ಸುದ್ದಿಗೋಷ್ಠಿ

Picture of Savistara

Savistara

Bureau Report

ಸುಳ್ಯ: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್ – ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.19ರಂದು

ಪೂ.10ಕ್ಕೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಬಳಿಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಪೂ.9.30ಕ್ಕೆ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಾವೇಶ ಉದ್ಘಾಟಿಸಲಿದ್ದಾರೆ. ಜಿಲ್ಲೆ ಹಾಗು ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ದೇಶ ಕಂಡಂತಹ ಅಪೂರ್ವ ರಾಷ್ಟ್ರಭಕ್ತ, ಖ್ಯಾತ ಸಂಸದೀಯ ಪಟು, ಅಪ್ರತಿಮ ಆಡಳಿತಗಾರ, ಪ್ರಖರ ವಾಗ್ನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಲಿ ಕಾರ್ಯಕ್ರಮವನ್ನು ‘ಆಟಲ್ ವಿರಾಸತ್ ಎಂಬ ಹೆಸರಿನಲ್ಲಿ ದೇಶದಾದ್ಯಂತ ಆಚರಿಸಲಾಗುತ್ತದೆ.ಭಾರತದ ಭವಿಷ್ಯವನ್ನು ರೂಪಿಸುವುವಲ್ಲಿ ಆಟಲ್‌ಜೀ ಅವರ ಕೊಡುಗೆಯನ್ನು ಜನತೆಗೆ ತಿಳಿಸುವ ನಿಟ್ಟಿನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ * ಅಟಲ್ ವಿರಾಸತ್‌ ಸಮಾವೇಶಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ 76 ಗ್ರಾಮಗಳ ಪ್ರತಿ ಬೂತ್‌ಗಳಿಂದ ಕಾರ್ಯಕರ್ತರು ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಜಿಲ್ಲಾ ಕಾರ್ಯದರ್ಶಿ ವಿನಯಕುಮಾ‌ರ್ ಮುಳುಗಾಡು, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮಂಡಲ ಕೋಶಾಧಿಕಾರಿ ಸಬೋದ್ ಶೆಟ್ಟಿ ಮೇನಾಲ, ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ನೀರಬಿದಿರೆ, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!