ಪೆಟ್ರೋಲ್ ಬೆಲೆ ಏರಿಕೆ ಪ್ರಸ್ತಾಪ: ಜನರ ಜೇಬಿಗೆ ಮತ್ತೊಮ್ಮೆ ಕತ್ತರಿ ಎಂದ ಆ‌ರ್.ಅಶೋಕ

Picture of Savistara

Savistara

Bureau Report

ಬೆಂಗಳೂರು: ಪೆಟ್ರೋಲ್ ಬೆಲೆ ಪ್ರಸ್ತಾಪದ ವಿರುದ್ಧ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. ಪೆಟ್ರೋಲ್ ದರ ಮತ್ತೆ ಏರಿಕೆ ಮಾಡಲು ಹೊರಟಿದ್ದೀರಲ್ಲ ಸ್ವಾಮಿ, ನಿಮ್ಮ ಸರ್ಕಾರದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿ. ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ!

ಜೂನ್ 2024

ಪೆಟ್ರೋಲ್ – ₹3 ಏರಿಕೆ

ಡೀಸೆಲ್ – ₹3.5 ಏರಿಕೆ

ಏಪ್ರಿಲ್ 2025

ಡೀಸೆಲ್ – ₹2 ಏರಿಕೆ

ನವೆಂಬರ್ 2025

ಪೆಟ್ರೋಲ್ – ₹1 ಏರಿಕೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರ ಬಂದಾಗಿನಿಂದ ಕಳೆದ 2.5 ವರ್ಷಗಳಲ್ಲಿ ಈಗಾಗಲೇ ಡೀಸೆಲ್ ಬೆಲೆ ₹5.5 ಹಾಗೂ ಪೆಟ್ರೋಲ್ ಬೆಲೆ ₹3 ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ.ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ಹೆಚ್ಚಳ ಮಾಡಲು ಹೊರಟಿದ್ದೀರಲ್ಲ, ನಿಮ್ಮ ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು. ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿಕಾರಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!