ನ.23ರಂದು ಕ್ಯಾಂಪ್ಕೋ ಚುನಾವಣೆ: 6 ಸ್ಥಾನಗಳಿಗೆ 8 ಮಂದಿ ಕಣದಲ್ಲಿ- 13 ಮಂದಿ ಅವಿರೋಧ ಆಯ್ಕೆ

Picture of Savistara

Savistara

Bureau Report

ಸುಳ್ಯ: ಅಡಿಕೆ ಬೆಳೆಗಾರರ ಅಂತಾರಾಜ್ಯ ಸಹಕಾರ ಸಂಸ್ಥೆ ‘ಕ್ಯಾಂಪ್ಕೋಕ್ಯಾಂಪ್ಕೋ’ ಆಡಳಿತ ಮಂಡಳಿಗೆ ನ.23ರಂದು ಚುನಾವಣೆ ನಡೆಯಲಿದೆ.19 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇದೀಗ ಉಳಿದ ಆರು ಸಾಮಾನ್ಯ ಸ್ಥಾನಗಳಿಗೆ ನವೆಂಬರ್ 23 ರಂದು ಮಂಗಳೂರಿನ

ಶಾರದಾ ವಿದ್ಯಾಲಯದಲ್ಲಿ ಚುನಾವಣೆ ನಡೆಯಲಿದೆ. 6 ಸ್ಥಾನಗಳಿಗೆ 8 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ರಾಜ್ಯದ 10 ಹಾಗೂ ಕೇರಳ ರಾಜ್ಯದ ಒಂಬತ್ತು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು.ಕೇರಳ ಎಲ್ಲಾ ಒಂಬತ್ತು ಹಾಗೂ ಕರ್ನಾಟಕದ ನಾಲ್ಕು ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು.

ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ದಯಾನಂದ ಹೆಗ್ಡೆ, ಮಹೇಶ ಚೌಟ, ಮುರಳಿಕೃಷ್ಣ ಕೆ.ಎನ್, ಪುರುಷೋತ್ತಮ ಭಟ್, ಸತೀಶ್ಚಂದ್ರ ಎಸ್.ಆ‌ರ್ ಹಾಗೂ ತೀರ್ಥರಾಮ ಎ ವಿ, ಸ್ವತಂತ್ರ ಅಭ್ಯರ್ಥಿಗಳಾದ ರಾಮಪ್ರತೀಕ್ ಮತ್ತು ಎಂ.ಜಿ.ಸತ್ಯನಾರಾಯಣ ಚುನಾವಣಾ ಕಣದಲ್ಲಿದ್ದಾರೆ.ಕರ್ನಾಟಕದಿಂದ ಮಾಲಿನಿಪ್ರಸಾದ್, ಗಣೇಶ್, ರಾಘವೇಂದ್ರ ಎಂ.ಎಚ್ ಮತ್ತು ವಿಶ್ವನಾಥ ಈಶ್ವರ ಹೆಗಡೆ, ಕೇರಳದಿಂದ ಸೌಮ್ಯ, ಸತೀಶ್ಚಂದ್ರ ಭಂಡಾರಿ, ಸದಾನಂದ ಶೆಟ್ಟಿ, ವಿವೇಕಾನಂದ ಗೌಡ, ಸತ್ಯನಾರಾಯಣ ಪ್ರಸಾದ್, ರಾಧಾಕೃಷ್ಣ, ಗಣೇಶ್ ಕುಮಾರ್, ವೆಂಕಟ್ರಮಣ ಭಟ್ ಹಾಗೂ ಪದ್ಮರಾಜ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!