ಚಿನ್ನದ ಬೆಲೆ 10 ಗ್ರಾಂಗೆ ₹1,500, ಬೆಳ್ಳಿ ಕೆ.ಜಿಗೆ ₹4,200 ಇಳಿಕೆ

Picture of Savistara

Savistara

Bureau Report

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆ ಆಗಿದೆ.

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,500 ಇಳಿಕೆಯಾಗಿ, ₹1,29,400ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಕಡಿಮೆಯಾಗಿ, ₹1,28,800 ಆಗಿದೆ.ಕೆ.ಜಿ ಬೆಳ್ಳಿ ಧಾರಣೆ ₹4,200 ಕಡಿಮೆಯಾಗಿ, ₹1,64,800ರಷ್ಟಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.ಅಮೆರಿಕದ ಫೆಡರಲ್ ರಿಸರ್ವ್ ಮುಂದಿನ ಬಡ್ಡಿ ದರ ಕಡಿತ ಮಾಡುವುದಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಉಂಟಾಗಿದೆ. ಇದೇ ಹಳದಿ ಲೋಹದ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!