ಸಿದ್ಧಾಪುರ: ಬಿ.ಎಲ್.ಎ -2 ಕಾರ್ಯಾಗಾರ

Picture of Savistara

Savistara

Bureau Report

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು , ಬಿಜೆಪಿ ಪಕ್ಷದ ಸಂಘಟನೆಯನ್ನು ಪ್ರಾಥಮಿಕ ಹಂತದಿಂದ ಮತ್ತಷ್ಟು ಕ್ರಿಯಾಶೀಲಗೊಳಿಸಲು ಇಂದು ಸಿದ್ದಾಪುರ ಮಂಡಲದಲ್ಲಿ ಆಯೋಜಿಸಲಾಗಿದ್ದ ಬಿ.ಎಲ್.ಎ -2 ಕಾರ್ಯಾಗಾರದಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಶಿವಮೊಗ್ಗ ಎಂಎಲ್‌ಸಿ ಡಾ. ಧನಂಜಯ ಸರ್ಜಾ ಮಾತನಾಡಿದರು.

ತಳಮಟ್ಟದ ಕಾರ್ಯಕರ್ತರ ಸಜ್ಜುಗೊಳಿಸುವಿಕೆ, ಜನಸಂಪರ್ಕ ಮತ್ತು ಪ್ರಚಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಚಿಂತನೆ ನಡೆಸಲಾಯಿತು. ಜನರ ವಿಶ್ವಾಸವನ್ನು ಗೆಲ್ಲುವ ನಿಟ್ಟಿನಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ಸಮರ್ಪಣೆಯೊಂದಿಗೆ ಕಾರ್ಯ ನಿರ್ವಹಿಸಬೇಕೆಂಬ ಸ್ಪಷ್ಟ ಸಂದೇಶ ನೀಡಲಾಯಿತು.

ಈ ವೇಳೆ ಸಿದ್ದಾಪುರ ಮಂಡಲ ಅಧ್ಯಕ್ಷರಾದ ತಿಮ್ಮಪ್ಪ ಅವರು, ಬಿ.ಎಲ್.ಎ-1 ಪ್ರಮುಖರಾದ ಆರ್.ಡಿ ಹೆಗ್ಡೆ ಅವರು, ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರವಿ ಹೆಗ್ಡೆ ಅವರು, ಉತ್ತರಕನ್ನಡ ಜಿಲ್ಲಾ ಬಿಜೆಪಿ ಪ್ರಧಾನಕಾರ್ಯದರ್ಶಿಗಳಾದ ಪ್ರಶಾಂತ್ ನಾಯ್ಕ್ ಅವರು, ಗುರುಪ್ರಸಾದ್ ಹೆಗ್ಡೆ ಅವರು,

ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಜಾತಾ ಭಟ್, ಎಸ್ .ಸಿ ಮೋರ್ಚಾ ಅಧ್ಯಕ್ಷರಾದ ನಂದನ್ ಅವರು, ಪ್ರಮುಖರಾದ ಗುರುರಾಜ್ ಶಾನ್ ಭೋಗ್ ಅವರು, ಸುರೇಶ್ ನಾಯ್ಕ್ ಅವರು, ಎಸ್.ಕೆ ಮೇಸ್ತಾ ಅವರು, ತೋಟಪ್ಪ ನಾಯ್ಕ್ ಅವರು, ಈಶ್ವರ್ ನಾಯ್ಕ್ ಅವರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಮಹಾಶಕ್ತಿಕೇಂದ್ರದ ಪ್ರಮುಖರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!