ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Picture of Savistara

Savistara

Bureau Report

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ನ.17) ಪ್ರಕಟಿಸಿತು.

ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿ ಆದೇಶ ನೀಡಿದೆ. ಅಲ್ಲದೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ 15 ದಿನದೊಳಗೆ ಸೂಕ್ತ ಆದೇಶ ಹೊರಡಿಸುವಂತೆಯೂ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!