ನಾಳೆ ಅಟಲ್ ವಿರಾಸತ್| ಪುತ್ತೂರಿನಲ್ಲಿ ಜಿಲ್ಲಾಮಟ್ಟದ ಸಮಾವೇಶ | ಬಿ.ವೈ. ವಿಜಯೇಂದ್ರ ಭಾಗಿ

Picture of Savistara

Savistara

Bureau Report

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಬಿ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಎಂಬ ಮೆಗಾ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದು ಅಟಲ್ ವಿರಾಸತ್ ಕಾರ್ಯಕ್ರಮ ಮಾಡುವಂತೆ ಪಕ್ಷದ ರಾಷ್ಟ್ರೀಯ ನಾಯಕತ್ವ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಪಕ್ಷದ ಶಕ್ತಿಕೇಂದ್ರ ಪುತ್ತೂರಿನಲ್ಲಿ ನಡೆಸಲು ತೀರ್ಮಾನಿಸ ಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಿಂದ ಪ್ರತಿನಿಧಿಗಳು ಭಾಗ ವಹಿಸಲಿದ್ದಾರೆ. ಪುತ್ತೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಿಂದ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಅಪೂರ್ವ ಕಾರ್ಯಕ್ರಮ:

ಕಾರ್ಯಕ್ರಮದ ಸಂಚಾಲಕ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಮಾತನಾಡಿ, ಇದೊಂದು ಅಪೂರ್ವ ಕಾರ್ಯಕ್ರಮ. ದೇಶಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಕೊಡುಗೆ ಅಪಾರ. ಕವಿ ಮನಸಿನ ವಾಜಪೇಯಿ ಅಜಾತಶತ್ರುವಾಗಿದ್ದರು. ಅವರು ಜಾರಿಗೊಳಿಸಿದ ಅನೇಕ ಯೋಜನೆಗಳು ದೇಶವನ್ನು ಹೊಸ ದಿಕ್ಕಿನತ್ತ ಕೊಂಡೊ ಯ್ದಿದೆ. ಪೋಟ್ರಾನ್ ಅಣುಬಾಂಬ್ ಪರೀಕ್ಷೆ ಮೂಲಕ ಜಗತ್ತಿನಲ್ಲಿ ಭಾರತದ ಶಕ್ತಿ ಅನಾವರಣಗೊಳಿಸಿದ ನಾಯಕ ಅಟಲ್. ಈ ಮೇರು ನಾಯಕನ ಸ್ಮರಣೆಯಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದೆ ಎಂದರು.ಮಾಜಿ ಶಾಸಕ ಸಂಜೀವ ಮಠಂದೂರು, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಮುಖಂಡರಾದ ಪ್ರೇಮಾನಂದ ಶೆಟ್ಟಿ ಸುನಿಲ್ ಆಳ್ವ, ಸೀತಾರಾಮ ರೈ ಕೆದಂಬಾಡಿ ಗುತ್ತು ಉಪಸ್ಥಿತರಿದ್ದರು.

ಆಕರ್ಷಕ ಮೆರವಣಿಗೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ9.30ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಅತಿಥಿ, ಗಣ್ಯರ ಜತೆ ಸಾವಿರಾರು ಕಾರ್ಯಕರ್ತರ ಮೆರವಣಿಗೆ ನಡೆಯಲಿದೆ. ಶ್ರೀಲಕ್ಷ್ಮೀ ವೆಂಕಟರಮಣ ದೇವಳದ ಬಳಿ ಇರುವ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಟಲ್ ಬಿಹಾರಿ ವಾಜಪೇಯಿ ಜೀವನದ ಬಗ್ಗೆ ಮಾತನಾಡುತ್ತಾರೆ. ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕರಾವಳಿಯ ಬಿಜೆಪಿ ಶಾಸಕರು, ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಸತೀಶ್ ಕುಂಪಲ ವಿವರಿಸಿದರು.

ಹಿರಿಯರಿಗೆ ಅಭಿನಂದನೆ

ವಾಜಪೇಯಿ ಅವರು 1991 ರಲ್ಲಿ ಪುತ್ತೂರಿಗೆ ಬಂದಾಗ ಭಾಷಣ ಮಾಡಿದ ಜಾಗದಲ್ಲೇ ಅಟಲ್ ವಿರಾಸತ್ ನಡೆಯುತ್ತಿದೆ. ಜನಸಂಘ ಕಾಲದಿಂದಲೇ ಸಂಘಟನೆಗೆ ಶ್ರಮಿಸಿದ ಪಕ್ಷದ ಹಿರಿಯರನ್ನು ಗುರುತಿಸಿ ಗೌರವಿಸ ಲಾಗುತ್ತದೆ. ಬೆಳಗ್ಗೆ ಸಮಾವೇಶ ಆರಂಭಕ್ಕೆ ಮುನ್ನ ಗಾಯಕ ರವೀಂದ್ರ ಪ್ರಭು ತಂಡದಿಂದ ದೇಶಭಕ್ತಿ ಗೀತೆ ಗಾಯನ ನಡೆಯಲಿದೆ. ಅಟಲ್ ಜೀವನದ ಹೆಜ್ಜೆಗುರುತುಗಳನ್ನು ಸೀನ್ ಮೂಲಕ ಬಿತ್ತರಿಸಲಾಗುತ್ತದೆ ಎಂದು ಸತೀಶ್ ಕುಂಪಲ ಹೇಳಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!