ಯಕ್ಷಗಾನ ಕಲಾವಿದರ ಸ್ತ್ರೀ ವೇಷ ಬಗ್ಗೆ ಅವಹೇಳನಕಾರಿ ಮಾತು | ಪುರುಷೋತ್ತಮ ಬಿಳಿಮಳೆ ವಿರುದ್ಧ ಯಕ್ಷಗಾನ ಕಲಾವಿದ, ಪ್ರೇಮಿಗಳ ಆಕ್ರೋಶ

Picture of Savistara

Savistara

Bureau Report

ಹಿಂದಿನ ಕಾಲಘಟ್ಟದಲ್ಲಿ ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದರು ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಕ್ಕೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಡೆದ ಕಾರ್ಯಕ್ರಮವೊಂದರಲ್ಲಿ ಅವರು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು.

ಮೈಸೂರು, ನ.19 : ಹಿಂದಿನ ಕಾಲಘಟ್ಟದಲ್ಲಿ ಯಕ್ಷಗಾನಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದರು ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಕ್ಕೆ ಗುರಿಯಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮೈಸೂರಿನಲ್ಲಿ ಮಾತನಾಡಿದ ನಡೆದ ಅವರು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಹಿಂದಿನ ಕಾಲದಲ್ಲಿ ಅಂತಹ ಅನಿವಾರ್ಯತೆ ಇದ್ದಿತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿದ್ದವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ನಂತರದ ಭಾಷಣದಲ್ಲಿ ಪುರುಷೋತ್ತಮ ಬಿಳಿಮಲೆಯವರು ನೀಡಿದ ಈ ಹೇಳಿಕೆ ಬಾರೀ ವಿವಾದ ಹುಟ್ಟಿಸಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು.

ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ 3 ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದರು. ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು.ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಬಾರದು. ಅವರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದಿದ್ದಾರೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!