ಉತ್ತರ ಪ್ರದೇಶ: ಮದರಸಾಗಳ ಮಾಹಿತಿ ಸಂಗ್ರಹ

Picture of Savistara

Savistara

Bureau Report

ಲಖನೌ: ದೆಹಲಿ ಸ್ಪೋಟದ ಬೆನ್ನಲ್ಲೇ, ಉತ್ತರ ಪ್ರದೇಶದಭಯೋತ್ಪಾದಕ ನಿಗ್ರಹ ದಳವು (ಎಟಿಎಸ್) ರಾಜ್ಯದ ಎಂಟು ಜಿಲ್ಲೆಗಳ ಮದರಸಾಗಳ ಸಿಬ್ಬಂದಿ, ಶಿಕ್ಷಕರು ಮತ್ತು ಅಲ್ಲಿನ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗ್‌ರಾಜ್, ಪ್ರತಾಪ್‌ಗಢ, ಕೌಶಾಂಭಿ, ಫತೇಪುರ, ಬಾಂದಾ, ಹಮೀರ್‌ಪು‌ರ್, ಚಿತ್ರಕೂಟ ಮತ್ತು ಮಹೊಬಾ ಜಿಲ್ಲೆಗಳ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಪತ್ರ ಬರೆದಿರುವ ಎಟಿಎಸ್, ಆದಷ್ಟು ಬೇಗ ತಮ್ಮ ವ್ಯಾಪ್ತಿಯ ಮದರಸಾಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದೆ. ಮದರಸಾಗಳ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ವಿಳಾಸ, ಮೊಬೈಲ್‌ ಸಂಖ್ಯೆ, ಪೋಷಕರ ಹೆಸರು ಮತ್ತಿತರ ವಿವರಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ.’ಎಟಿಎಸ್‌ ಕೋರಿರುವ ಮಾಹಿತಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 206 ಮದರಸಾಗಳಿವೆ ಎಂದು ಅಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ಕೃಷ್ಣ ಮುರಾರಿ ಸುದ್ದಿಗಾರರಿಗೆ ತಿಳಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!