ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿಗೆ ಸಾಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

Picture of Savistara

Savistara

Bureau Report

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದಉದ್ಯಮಗಳನ್ನು ಸ್ಥಾಪಿಸಲು ಎಲ್ಲ ಬೆಂಬಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕ‌ರ್ ಭರವಸೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪದಲ್ಲಿ ಮಾತನಾಡಿದ ಅವರು, ‘ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇ 3ರ ಬಡ್ಡಿ ದರದಲ್ಲಿ ₹5 ಕೋಟಿವರೆಗೆ ಸಾಲ ನೀಡುತ್ತದೆ’ ಎಂದರು.ಮಹಿಳೆಯರ ಸಬಲೀಕರಣದ ಉದ್ದೇಶದ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾವು ₹32,000 ಕೋಟಿ ಇರಿಸಿದೆ. ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ವಾರ್ಷಿಕ ₹52 ಸಾವಿರ ಕೋಟಿ ಖರ್ಚು ಮಾಡುತ್ತಿದೆ ಎಂದರು.’ನಾನು ಎರಡು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡಿದ್ದೇನೆ’ ಎಂದು ತಿಳಿಸಿದರು.

ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಸಾಯಿರಾಮ್ ಪ್ರಸಾದ್, ಉಪಾಧ್ಯಕ್ಷ ಬಿ.ಪಿ.ಶಶಿಧ‌ರ್ ಮತ್ತಿತರರು ಇದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!